ಬೆಂಗಳೂರು, ಜೂನ್ 25: ಹಲಸೂರಿನ ಕಾರ್ ಸ್ಟ್ರೀಟ್‌ನಲ್ಲಿ ನಡೆದ ಬೆಳ್ಳಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಯುವಕನನ್ನು ಬಂಧಿಸಿದ್ದಾರೆ. ಅಂಗಡಿಯ ಗೋಡೆ ಕೊರೆದು 10 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ತಮಿಳುನಾಡು ಮೂಲದ ತೇಜು ಎಂದು ಗುರುತಿಸಲಾಗಿದೆ. ಆರೋಪಿ ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಈ ಕೃತ್ಯ ಎಸಗಿದ್ದ ಎಂಬುದರ ಜೊತೆಗೆ ಇದೇ ಮೊದಲ ಬಾರಿಗೆ ಇಂತಹ ಅಪರಾಧ ಚಟುವಟಿಕೆಯಲ್ಲಿ ಈತ ಭಾಗಿಯಾಗಿ ಎಂಬುದು ಗೊತ್ತಾಗಿದೆ. ಬಂಧಿತನಿಂದ 5 ಕೆಜಿ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನುಳಿದ ಬೆಳ್ಳಿ ಆಭರಣಗಳಿಗಾಗಿ ತನಿಖೆ ಮುಂದುವರಿದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.