ಬೆಂಗಳೂರು, ಜುಲೈ 29: ನಗರದ ಬೈಯತರಾಯನಪುರ ಬಳಿಯ ಐಟಿಐ ಲೇಔಟ್‌ನಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶ ಮೂಲದ ಮುಕೇಶ್ ಎಂಬಾತ ನಗರದಲ್ಲಿ ಭಿಕ್ಷಾಟನೆ ಮಾಡುವ ನೆಪದಲ್ಲಿ ಅಂಗವಿಕಲನಂತೆ ನಟಿಸಿ ಜನರನ್ನು ವಂಚಿಸುತ್ತಿದ್ದ. ಕರುಣೆ ಬರುವಂತೆ ಕುಂಟುತ್ತಾ ನಡೆದು ಜನರ ಸಹಾನುಭೂತಿ ಗಳಿಸುತ್ತಿದ್ದ ಈತ, ಭಿಕ್ಷೆ ಬೇಡುವ ಸೋಗಿನಲ್ಲಿ ಮೊಬೈಲ್ ಫೋನ್‌ಗಳನ್ನು ಕದಿಯುತ್ತಿದ್ದ ಆರೋಪಕ್ಕೆ ಗುರಿಯಾಗಿದ್ದಾನೆ.
ಸ್ಥಳೀಯರು ಈತನ ನಡವಳಿಕೆ ಬಗ್ಗೆ ಅನುಮಾನಗೊಂಡು ವಿಚಾರಿಸಿದಾಗ, ಮುಕೇಶ್‌ನ ಕಳ್ಳಾಟ ಬಯಲಾಗಿದೆ. ಕೈಕಾಲು ನೆಟ್ಟಗಿದ್ದರೂ ಕೂಡ ಶೋಕಿ ಜೀವನಕ್ಕಾಗಿ ಭಿಕ್ಷೆ ಬೇಡುತ್ತಾ, ಮೊಬೈಲ್ ಕಳ್ಳತನ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ. ಸ್ಥಳೀಯರ ಎದುರು ಸಿಕ್ಕಿಬಿದ್ದಾಗ ಆತ ನೆಟ್ಟಗೆ ನಿಂತು ಕೈಜೋಡಿಸಿ ಕ್ಷಮೆಯಾಚಿಸಿದ್ದಾನೆ. ಬಳಿಕ, ಸಾರ್ವಜನಿಕರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಉತ್ತರ ಪ್ರದೇಶದಿಂದ ಬೆಂಗಳೂರಿಗೆ ಬಂದು ಭಿಕ್ಷಾಟನೆಯನ್ನೇ ವ್ಯಾಪಾರ ಮಾಡಿಕೊಂಡಿದ್ದ ಈತನ ಕೃತ್ಯ ಸದ್ಯ ನಗರದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈತನ ಕಳ್ಳಾಟದ ಎರಡು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
