ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಳೆಪ ಫಾರ್ಮ್ನಿಂದ ಬಳಲುತ್ತಿದ್ದ ವಿಲಿಯಮ್ಸನ್ ತಮ್ಮ 35 ನೇ ವಯಸ್ಸಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಆಟದ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಕಳೆದ ವರ್ಷ ಅಂದರೆ 2025 ರಲ್ಲಿ ಟಿ20 ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದ ಕೇನ್, ಬಹಳ ಸಮಯದಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಇದೀಗ ತಮ್ಮ 16 ವರ್ಷಗಳ ವೃತ್ತಿಜೀವನಕ್ಕೆ ಪೂರ್ಣವಿರಾಮವನ್ನಿಟ್ಟಿರುವ ವಿಲಿಯಮ್ಸನ್ ನ್ಯೂಜಿಲೆಂಡ್ ತಂಡದ ಪರ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಕಿವೀಸ್ ಪರ ಅತ್ಯಧಿಕ ರನ್ ಕಲೆಹಾಕಿರುವ ಆಟಗಾರನೆನಿಸಿಕೊಂಡಿರುವ ಕೇನ್, ಇದುವರೆಗೆ ಆಡಿರುವ 378 ಪಂದ್ಯಗಳಲ್ಲಿ 19,346 ರನ್ ಗಳಿಸಿದ್ದಾರೆ. ಇದರಲ್ಲಿ 48 ಶತಕಗಳು ಸೇರಿವೆ. ಆಟಗಾರನಾಗಿ ಮಾತ್ರವಲ್ಲದೆ ನಾಯಕನಾಗಿಯೂ ತಂಡವನ್ನು ಮುನ್ನಡೆಸಿರುವ ವಿಲಿಯಮ್ಸನ್, ತಮ್ಮ ನಾಯಕತ್ವದಲ್ಲಿ ತಂಡವನ್ನು ಎರಡು ಐಸಿಸಿ ಪಂದ್ಯಾವಳಿಗಳ ಫೈನಲ್‌ಗೆ ಕೊಂಡೊಯ್ದಿದ್ದರು. ಅದರಲ್ಲಿ ಒಮ್ಮೆ ತಂಡವನ್ನು ಚಾಂಪಿಯನ್ ಕೂಡ ಮಾಡಿದ್ದರು.
One of our greatest ever, signing off.
Kane Williamson has announced his retirement from international cricket effective immediately.
Head to https://t.co/Pm8RiU65zt to read more. pic.twitter.com/e22MeZ410e
— BLACKCAPS (@BLACKCAPS) June 12, 2026
Published On – 4:18 pm, Fri, 12 June 26