Headlines

ಅಕ್ರಮವಾಗಿ ‘ಜನ ನಾಯಗನ್’ ಟಿಕೆಟ್ ದರ ಏರಿಕೆ: ಕ್ರಮ ತೆಗೆದುಕೊಳ್ಳಲು ವಿಜಯ್ ಅಭಿಮಾನಿಗಳ ಆಗ್ರಹ – Kannada News | CM Vijay starrer Jana Nayagan movie Ticket Prices illegally Hiked Fans demand action

ಖ್ಯಾತ ನಟ, ತಮಿಳುನಾಡು ಸಿಎಂ ವಿಜಯ್ (CM Vijay) ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾ ಜುಲೈ 23ರಂದು ತೆರೆಕಾಣುತ್ತಿದೆ. ಆದರೆ, ತಮಿಳುನಾಡಿನಲ್ಲಿ ಸರ್ಕಾರಿ ನಿಯಮಾವಳಿಯಂತೆ ಟಿಕೆಟ್ ದರವನ್ನು 190 ರೂಪಾಯಿಗೆ ಮಿತಿಗೊಳಿಸಲಾಗಿದ್ದರೂ, ಕೆಲವು ಚಿತ್ರಮಂದಿರಗಳಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿರುವುದು ತೀವ್ರ ಗೊಂದಲ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ಚಿತ್ರಮಂದಿರವೊಂದರ ಮುಂದೆ ಅಭಿಮಾನಿಗಳು ಹಾಗೂ ಚಿತ್ರಮಂದಿರದ ಮಾಲೀಕರ ನಡುವೆ ತೀವ್ರ ವಾಗ್ವಾದ ನಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 150 ರೂಪಾಯಿಯಿಂದ 190 ರೂಪಾಯಿ ಇರಬೇಕಾದ ಟಿಕೆಟ್‌ಗಳನ್ನು 300 ರೂಪಾಯಿಯಿಂದ 500 ರೂಪಾಯಿವರೆಗೆ ಹಾಗೂ ಕೆಲವು ಕಡೆ 700 ರೂಪಾಯಿವರೆಗೂ ಬ್ಲಾಕ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಅಭಿಮಾನಿಗಳು ಆರೋಪಿಸಿದ್ದಾರೆ.

ವೈರಲ್ ವಿಡಿಯೋದಲ್ಲಿ ಏನಿದೆ?

‘300 ರೂಪಾಯಿಗೆ ಟಿಕೆಟ್ ಮಾರಾಟ ಮಾಡಲು ನಿಮಗೆ ಯಾರು ಅನುಮತಿ ಕೊಟ್ಟಿದ್ದು? ಮುಖ್ಯಮಂತ್ರಿಗಳ ಕಚೇರಿಗೆ ಕರೆ ಮಾಡಿ ಕೇಳಿ’ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿರುವುದು ವೈರಲ್ ವಿಡಿಯೋದಲ್ಲಿ ಕಂಡುಬಂದಿದೆ. ಇದಕ್ಕೆ ಉತ್ತರಿಸಿದ ಚಿತ್ರಮಂದಿರದ ಆಡಳಿತ ಮಂಡಳಿ, ‘ವಿತರಿಕರೇ ಈ ದರವನ್ನು ನಿಗದಿಪಡಿಸಿದ್ದಾರೆ’ ಎಂದು ಸಮರ್ಥಿಸಿಕೊಂಡಿದೆ. ಜೊತೆಗೆ ಅಭಿಮಾನಿಗಳೇ ಟಿಕೆಟ್ ಪಡೆದು ಹೊರಗಡೆ 1000 ರೂಪಾಯಿಗೆ ಮಾರಿಕೊಳ್ಳುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡಿದೆ.

ಕ್ರಮ ಕೈಗೊಳ್ಳಲು ಸಿಎಂ ವಿಜಯ್‌ಗೆ ಮನವಿ:

ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅಭಿಮಾನಿಗಳು ಹಾಗೂ ಪ್ರೇಕ್ಷಕರು, ಈ ದರ ಏರಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ‘ತಮ್ಮದೇ ಸಿನಿಮಾಗೆ ಈ ರೀತಿ ಅಕ್ರಮ ದರ ನಿಗದಿಪಡಿಸುತ್ತಿದ್ದರೆ, ಇನ್ನುಳಿದ ವಿಷಯಗಳಲ್ಲಿ ಹೇಗೆ ನಿಯಂತ್ರಣ ಸಾಧಿಸುತ್ತಾರೆ? ಈ ಭ್ರಷ್ಟಾಚಾರದ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಡುಗಡೆಗೂ ಮುನ್ನ ‘ಜನ ನಾಯಗನ್’ ಚಿತ್ರದಲ್ಲಿ ಬದಲಾವಣೆ: ಟೈಟಲ್ ಕಾರ್ಡ್‌ನಲ್ಲಿ ವಿಜಯ್ ಹೆಸರು ಹೇಗಿದೆ?

‘ಜನ ನಾಯಗನ್’ ಚಿತ್ರದಲ್ಲಿ ವಿಜಯ್ ಅವರಿಗೆ ಜೋಡಿಯಾಗಿ ಪೂಜಾ ಹೆಗ್ಡೆ ನಟಿಸಿದ್ದು, ಮಮಿತಾ ಬೈಜು ಹಾಗೂ ಬಾಬಿ ಡಿಯೋಲ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ತೆಲುಗಿನ ಹಿಟ್ ಸಿನಿಮಾ ‘ಭಗವಂತ್ ಕೇಸರಿ’ ರಿಮೇಕ್ ಆಗಿರುವ ಈ ಚಿತ್ರವು ವಿಜಯ್ ಅವರ ಕೊನೆಯ ಸಿನಿಮಾವಾಗಿರುವುದರಿಂದ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *