ಅಕ್ರಮ ಹಣ ವರ್ಗಾವಣೆ: ಬೆಂಗಳೂರಿನ 5 ಕಂಪನಿಗಳಿಗೆ ಇಡಿ ಶಾಕ್, 6 ಕೋಟಿ ರೂ ಜಪ್ತಿ – Kannada News | Money Laundering Case: ED Raids 5 Bengaluru Companies, Seizes 6 Crore

ಬೆಂಗಳೂರು, ಜೂನ್​​ 20: ವರ್ಚುವಲ್ ಡಿಜಿಟಲ್ ಸ್ವತ್ತುಗಳನ್ನು ಬಳಸಿಕೊಂಡು ಅನಧಿಕೃತವಾಗಿ ವಿದೇಶಗಳಿಗೆ ಹಣ ವರ್ಗಾವಣೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು (bangaluru) ಮೂಲದ ಐದು ಪ್ರಮುಖ ಕಂಪನಿಗಳಿಗೆ ಸೇರಿದ ಆರು ಸ್ಥಳಗಳ ಮೇಲೆ ಬೆಂಗಳೂರು ವಲಯ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಭರ್ಜರಿ ಕಾರ್ಯಾಚರಣೆ ವೇಳೆ ಅಂದಾಜು 6 ಕೋಟಿ ರೂ. ನಗದು ಹೊಂದಿರುವ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿದ್ದಾರೆ.

ಮುಖ್ಯಾಂಶಗಳು

  • ಡಿಜಿಟಲ್ ಸ್ವತ್ತುಗಳ ಮೂಲಕ ವಿದೇಶಕ್ಕೆ ಹಣ ರವಾನೆ
  • 6 ಕೋಟಿ ರೂ. ಬ್ಯಾಂಕ್ ಖಾತೆಗಳು ಜಪ್ತಿ ಮಾಡಿದ ಇಡಿ
  • ಬೆಂಗಳೂರಿನ ಕಂಪನಿಗಳ ಮೇಲೆ ದಾಳಿ ಮಾಡಿದ್ದ ಇಡಿ

ಬೆಂಗಳೂರು ಮೂಲದ ಐದು ಕಂಪನಿಗಳ ಮೇಲೆ ದಾಳಿ

ಬೆಂಗಳೂರು ವಲಯ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA), 1999ರ ಸೆಕ್ಷನ್ 37ರ ಅಡಿಯಲ್ಲಿ ಜೂನ್ 17ರಂದು ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು ಎಂದು ಇಡಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಜಾರಿ ನಿರ್ದೇಶನಾಲಯ ಟ್ವೀಟ್​

ಬೆಂಗಳೂರಿನ ಮೆಸರ್ಸ್ ಟ್ರಾನ್ಸಾಕ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಮೆಸರ್ಸ್ ಕ್ಯಾರೆಟ್ಎಕ್ಸ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಮೆಸರ್ಸ್ ಮೋಕ್ಷಜ್ಞ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಮೆಸರ್ಸ್ ಬೈಹಟ್ಕೆ ಇಂಟರ್ನೆಟ್ ಪ್ರೈವೇಟ್ ಲಿಮಿಟೆಡ್ ಮತ್ತು ಮೆಸರ್ಸ್ ಅಭಿಭಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗಳಿಗೆ ಸೇರಿದ ಕಚೇರಿಗಳ ಮೇಲೆ ದಾಳಿ ಮಾಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಂತ್ರಿ ಬಿಲ್ಡರ್ಸ್ ಮೇಲೆ ಇಡಿ ದಾಳಿ: ಮತ್ತೆ ಶಾಕ್​ ಕೊಟ್ಟ ದೆಹಲಿ ಅಧಿಕಾರಿಗಳು

ಬೆಂಗಳೂರು ಮೂಲದ ಈ ಕಂಪನಿಗಳು ಡಿಜಿಟಲ್ ಸ್ವತ್ತುಗಳ ಮೂಲಕ ಕಾನೂನುಬಾಹಿರವಾಗಿ ವಿದೇಶಗಳಿಗೆ ಹಣ ವರ್ಗಾವಣೆ ಮಾಡಲು ನೆರವಾಗಿವೆ ಎಂಬ ಗಂಭೀರ ಆರೋಪಗಳ ಆಧಾರದ ಮೇಲೆ ಈ ಶೋಧ ಕಾರ್ಯ ನಡೆಸಲಾಗಿತ್ತು. ದಾಳಿಯ ಸಂದರ್ಭದಲ್ಲಿ, ಈ ಅಕ್ರಮ ವಹಿವಾಟುಗಳಿಗೆ ಬಳಸಲಾದ ಕೆಲವು ಸಂಸ್ಥೆಗಳ ಬ್ಯಾಂಕ್ ಖಾತೆಗಳ ಮೇಲೆ ಇಡಿ ತಡೆಯಾಜ್ಞೆ ಹೊರಡಿಸಿದೆ.

ಪ್ರಸ್ತುತ ಈ ಖಾತೆಗಳಲ್ಲಿ ಒಟ್ಟು 6 ಕೋಟಿ ರೂ ಬಾಕಿ ಹಣವಿದ್ದು, ಅಗತ್ಯ ಅನುಮತಿಗಳಿಲ್ಲದೆ ಫೆಮಾ ನಿಯಮಗಳನ್ನು ಉಲ್ಲಂಘಿಸಿ ವಿದೇಶಕ್ಕೆ ಹಣ ರವಾನಿಸಲು ಈ ಖಾತೆಗಳನ್ನು ಬಳಸಲಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಹೀರಾ ಗ್ರೂಪ್​​ ಕಂಪನಿಗೆ ಸೇರಿದ್ದ 159 ಕೋಟಿ ರೂ ಮೌಲ್ಯದ ಆಸ್ತಿ ಹರಾಜು ಹಾಕಿದ ಇಡಿ

ಬಹುಕೋಟಿ ಹೂಡಿಕೆ ವಂಚನೆ ಆರೋಪ ಎದುರಿಸುತ್ತಿರುವ ಹೀರಾ ಗ್ರೂಪ್​ ಆಫ್​ ಕಂಪನಿ ಮುಖ್ಯಸ್ಥೆ ನೊಹೀರಾ ಶೇಖ್​​ ಮತ್ತು ಅವರಿಗೆ ಸಂಬಂಧಿಸಿದ ಸಂಸ್ಥೆಗಳಿಗೆ ಹೈದರಾಬಾದ್ ವಲಯ ಜಾರಿ ನಿರ್ದೇಶನಾಲಯ ಬಿಗ್ ಶಾಕ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿ ಮಾಡಲಾಗಿದ್ದ ಸುಮಾರು 159 ಕೋಟಿ ರೂ ಮೌಲ್ಯದ 23 ಸ್ಥಿರ ಆಸ್ತಿಗಳನ್ನು ಅಧಿಕಾರಿಗಳು ಯಶಸ್ವಿಯಾಗಿ ಹರಾಜು ಹಾಕಿದ್ದಾರೆ.

ಜಾರಿ ನಿರ್ದೇಶನಾಲಯ ಟ್ವೀಟ್​

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಇಡಿ ಅಧಿಕಾರಿಗಳು ಹರಾಜು ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಅಕ್ರಮ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ಮುಟ್ಟುಗೋಲು ಹಾಕಿಕೊಂಡ ಆಸ್ತಿಯನ್ನು ನಗದೀಕರಿಸುವುದು ಹಾಗೂ ಆ ಮೂಲಕ ವಂಚನೆಗೊಳಗಾದ ಹೂಡಿಕೆದಾರರಿಗೆ ಅವರ ಹಣವನ್ನು ಮರಳಿ ನೀಡುವಲ್ಲಿ ಇಲಾಖೆ ಸಂಪೂರ್ಣ ಬದ್ಧವಾಗಿದೆ ಎಂದು ಇಡಿ ತನ್ನ ಅಧಿಕೃತ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *