ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮವಾದ ಫರ್ನಿಚರ್ ಅಂಗಡಿ: ಕೋಟ್ಯಾಂತರ ರೂ. ಮೌಲ್ಯದ ಪೀಠೋಪಕರಣಗಳು ಅಗ್ನಿಗಾಹುತಿ

ಬೆಳಗಾವಿ, ಮೇ 30: ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೆರೆ ಕ್ರಾಸ್ ಬಳಿ ಇರುವ ಎಸ್‌ಎಂಕೆ ಫರ್ನಿಚರ್ ಅಂಗಡಿಯಲ್ಲಿ ಮಧ್ಯರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಮತ್ತು ಇತರೆ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಬೆಂಕಿ ಸ್ಫೋಟದ ಮಾದರಿಯಲ್ಲಿ ಹರಡಿರುವುದು ಕಂಡುಬಂದಿದೆ. ಅದೃಷ್ಟವಶಾತ್, ಮಧ್ಯರಾತ್ರಿ ಘಟನೆ ನಡೆದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಂಗಡಿಗೆ ಕಾವಲಿದ್ದ ಸೆಕ್ಯೂರಿಟಿ ಗಾರ್ಡ್ ಹೊರಗಡೆ ಮಲಗಿದ್ದರಿಂದ ಆತ ಸುರಕ್ಷಿತವಾಗಿ ಪಾರಾಗಿದ್ದಾನೆ. ಬೆಂಕಿ ಹೊತ್ತಿಕೊಂಡ ಕೂಡಲೇ ಸೆಕ್ಯೂರಿಟಿ ಗಾರ್ಡ್‌ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಷ್ಟರಲ್ಲಿ ಸಂಪೂರ್ಣ ಅಂಗಡಿ ಭಸ್ಮವಾಗಿತ್ತು. ಈ ಸಂಬಂಧ ಘಟಪ್ರಭ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಅಥವಾ ಗ್ಯಾಸ್ ಬ್ಲಾಸ್ಟ್ ಕಾರಣವಾಗಿರಬಹುದು ಎಂಬ ಎರಡು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *