ಅಚ್ಚರಿ ಅನ್ನಿಸಿದರೂ ಸತ್ಯ: ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ! – Kannada News | 9th Class Student Gives Birth to Baby in Hostel at Sirs

ಕಾರವಾರ, (ಜೂನ್ 12): 9ನೇ ತರಗತಿ ವಿದ್ಯಾರ್ಥಿನಿಯೋರ್ವಳು (Student) ಹಾಸ್ಟೆಲ್​​​ನಲ್ಲಿ (Hostel) ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ  ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ (Sirsi) ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಚ್ಚರಿ ಅನ್ನಿಸಿದರೂ ಸತ್ಯ. ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿರಸಿ ತಹಶಿಲ್ದಾರ್ ಹಾಗೂ ಪಿಎಸ್ಐ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಆಕೆ 9ನೇ ತರಗತಿ ಅಂದ್ರೆ ಏನೋ ಹದಿನಾಲ್ಕು ಹದಿನೈದು ವರ್ಷ ಇರಬಹುದು. ತಮ್ಮ ಮಗಳು ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದ್ರೆ, ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೇರಿರುವ ಸುದ್ದಿ ಕೇಳಿ ಶಾಕ್​​​ ಆಗಿದ್ದಾರೆ. ಬಾಲಕಿಯ ಈ ಸ್ಥಿತಿಗೆ ಯಾರು ಕಾರಣ? ಗರ್ಭಿಣಿಯಾಗಿರುವುದು ಗೊತ್ತಾಗಿಲ್ವಾ ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ. ಯಾಕಂದ್ರೆ, ಮೊನ್ನೆ ಅಷ್ಟೇ ಶಾಲೆಗಳು ಪ್ರಾರಂಭವಾಗಿದ್ದು, 10 ದಿನದಲ್ಲೇ ಮಗುವಿಗೆ ಜನ್ಮ ನೀಡಿರುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಸದ್ಯ ಪೊಲೀಸರು ತನಿಖೆ ನಡೆಸಿದ್ದಾರೆ.

Source link

Leave a Reply

Your email address will not be published. Required fields are marked *