ಅಡುಗೆಯ ರುಚಿ ಹೆಚ್ಚಿಸುವ ಇಂಗು ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ – Kannada News | There are many health benefits of using Asafoetida in cooking

ಭಾರತೀಯರ ಅಡುಗೆ ಮನೆಗಳಲ್ಲಿ ಇಂಗು (Asafoetida) ಇದ್ದೇ ಇರುತ್ತದೆ. ಸಣ್ಣ ಬಗೆಯ ಮಸಾಲೆಯಾಗಿರುವ ಇಂಗು ಅಡುಗೆಗೆ ವಿಭಿನ್ನ ಸುವಾಸನೆ ಮತ್ತು ರುಚಿಯನ್ನು ನೀಡುತ್ತದೆ. ಬೇಳೆ ಸಾರು, ರಸಂ, ಸಾಂಬಾರು ಸೇರಿದಂತೆ ಹೆಚ್ಚಿನ ತರಕಾರಿ ಪದಾರ್ಥಗಳಿಗೆ ಇಂಗು ಹಾಕಲಾಗುತ್ತದೆ. ಹೀಗೆ ಭಾರತೀಯ ಪಾಕಪದ್ಧತಿಯಲ್ಲಿ ಪ್ರಮುಖ ಪಾತ್ರವಹಿಸುವಂತಹ ಇಂಗಿಗೆ ಆಯುರ್ವೇದದಲ್ಲೂ ಮುಖ್ಯ ಸ್ಥಾನವಿದೆ. ಹೌದು ಹಲವು ಔಷಧೀಯ ಗುಣಗಳನ್ನು ಹೊಂದಿರುವ ಇಂಗು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ತುಂಬಾ ಪ್ರಯೋಜನಕಾರಿ. ಒಟ್ಟಾರೆಯಾಗಿ ಅಡುಗೆಗೆ ಚಿಟಿಕೆ ಇಂಗು ಸೇರಿಸುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

ಇಂಗಿನ ಆರೋಗ್ಯ ಪ್ರಯೋಜನಗಳೇನು?

ಜೀರ್ಣಕ್ರಿಯೆಗೆ ಸಹಕಾರಿ: ಇಂಗು ಜೀರ್ಣಕ್ರಿಯೆಗೆ ಬೇಕಾಗುವಂತಹ ಕಿಣ್ವಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದರ ಆಂಟಿಸ್ಪಾಸ್ಮೊಡಿಕ್‌ ಮತ್ತು ಉರಿಯೂತ ನಿವಾರಕ ಗುಣಗಳು ಹೊಟ್ಟೆಯುಬ್ಬರ, ಗ್ಯಾಸ್‌, ಅಜೀರ್ಣದಂತಹ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ತುಂಬಾನೇ ಸಹಕಾರಿ.

ಉಸಿರಾಟದ ಸಮಸ್ಯೆಯನ್ನು ನಿವಾರಿಸುತ್ತದೆ: ಇಂಗು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು, ಇದು ಶ್ವಾಸಕೋಶಗಳಿಗೆ ಪ್ರಯೋಜನಕಾರಿಯಾಗಿದೆ. ಇದು ಆಸ್ತಮಾ, ಕೆಮ್ಮು ಮತ್ತು ಎದೆಯಿಂದ ಕಫವನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ, ಉಸಿರಾಟವನ್ನು ಸುಲಭಗೊಳಿಸುತ್ತದೆ.

ತಲೆನೋವನ್ನು ನಿವಾರಿಸುತ್ತದೆ: ಇಂಗುವಿನ ಉರಿಯೂತ ನಿವಾರಕ ಗುಣಗಳು ತಲೆಯಲ್ಲಿರುವ ರಕ್ತನಾಳಗಳ ಊತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸ್ವಲ್ಪ ಇಂಗನ್ನು  ಬೆಚ್ಚಗಿನ ನೀರಿನೊಂದಿಗೆ ಬೆರೆಸಿ ಕುಡಿಯುವುದರಿಂದ ಮೈಗ್ರೇನ್ ಮತ್ತು ಒತ್ತಡದ ತಲೆನೋವಿನಿಂದ ಪರಿಹಾರ ಸಿಗುತ್ತದೆ.

ಇದನ್ನೂ ಓದಿ: ಪ್ರತಿದಿನ ಊಟದ ಬಳಿಕ ಒಂದು ಸ್ಪೂನ್‌ ಸೋಂಪು ತಿನ್ನಿ, ಅದ್ಭುತ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ

ಮುಟ್ಟಿನ ನೋವನ್ನು ನಿವಾರಿಸುತ್ತದೆ: ಹೆಚ್ಚಿನ ಮಹಿಳೆಯರು ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವು ಮತ್ತು ಸೆಳೆತವನ್ನು ಅನುಭವಿಸುತ್ತಾರೆ. ಇಂತಹ ಸಂದರ್ಭದಲ್ಲಿ ನೀರಿನೊಂದಿಗೆ ಒಂದು ಚಿಟಿಕೆ ಇಂಗು ಬೆರೆಸಿ  ಸೇವಿಸಿದರೆ ನೋವು ನಿವಾರಣೆಯಾಗುತ್ತದೆ ಎಂದು ಹೇಳಲಾಗುತ್ತದೆ.

ಚರ್ಮಕ್ಕೆ ಪ್ರಯೋಜನಕಾರಿ: ಇಂಗು ವಯಸ್ಸಾಗುವಿಕೆ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ಮುಖದ ಸುಕ್ಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ: ಇಂಗಿನಲ್ಲಿ ಕೂಮರಿನ್ ಎಂಬ ಪದಾರ್ಥವಿದೆ. ಇದು ರಕ್ತ ತೆಳುವಾಗಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡವನ್ನು ಸಹ ನಿಯಂತ್ರಿಸುತ್ತದೆ. ಇದು ದೇಹದಲ್ಲಿ ರಕ್ತದ ಹರಿವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೀಗೆ ಅಡುಗೆಗೆ ಒಂದು ಚಿಟಿಕೆ ಇಂಗು ಸೇರಿಸುವುದರಿಂದ ರುಚಿ ಮತ್ತು ಸುವಾಸನೆ ಎರಡನ್ನೂ ಹೆಚ್ಚಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *