ಬೆಂಗಳೂರು, ಆಗಸ್ಟ್ 02: ‘ಈ ಹಿಂದೆ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ನಿರ್ಧಾರದಿಂದ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾಗ ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ತೆರಳಿ ಪಕ್ಷದ ಪರವಾಗಿ ಶ್ರೀಗಳ ಪಾದಕ್ಕೆ ಬಿದ್ದು ಕ್ಷಮೆ ಯಾಚಿಸಿದ್ದಾಗಿ’ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಲ್ಲಿ ರಂಭಾಪುರಿ ಶ್ರೀಗಳಿಂದ ಇಷ್ಟಲಿಂಗ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ‘ಆಗ ಅನೇಕ ಟೀಕೆಗಳು ವ್ಯಕ್ತವಾಗಿದ್ದರೂ, ಆ ಟೀಕೆಗಳೆಲ್ಲವೂ ಕಾಲಾನಂತರದಲ್ಲಿ ಮರೆಯಾಗಿ, ನಮ್ಮ ಕೆಲಸಗಳು ಮಾತ್ರ ಉಳಿದುಕೊಂಡಿವೆ. ಟೀಕೆಗಳು ಸಾಯುತ್ತವೆ, ನಮ್ಮ ಸಾಧನೆಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ. ತಾವು ಅಂದು ಕ್ಷಮೆ ಕೇಳಿದ್ದು ಸತ್ಯ ಎಂಬುದನ್ನು ಇಂದು ವಿರೋಧಿಗಳು ಕೂಡ ಒಪ್ಪಿಕೊಂಡಿದ್ದಾರೆ. ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶವಿಲ್ಲದೆ ಬದುಕಿದರೆ ಬದುಕಿಗೇ ಅವಮಾನ ಎಂದು ಮಾರ್ಮಿಕವಾಗಿ ನುಡಿದ ಡಿ.ಕೆ. ಶಿವಕುಮಾರ್, ವಿಪಕ್ಷಗಳು ದಿನನಿತ್ಯ ಮಾಡುವ ಟೀಕೆಗಳಿಗೆ ತಾವು ತಲೆಕೆಡಿಸಿಕೊಳ್ಳುವುದಿಲ್ಲ’ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
