ಟಾಟಾ ಐಪಿಎಲ್ 2026ರ ಜಿಟಿ ಮತ್ತು ಸಿಎಸ್‌ಕೆ ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ನಾಯಕ ಶುಭ್‌ಮನ್ ಗಿಲ್ ಫೀಲ್ಡಿಂಗ್‌ನಲ್ಲಿ ಮ್ಯಾಜಿಕ್ ಮಾಡಿದ್ದಾರೆ. ರಶೀದ್ ಖಾನ್ ಎಸೆದ 11ನೇ ಓವರ್‌ನ ಎರಡನೇ ಎಸೆತದಲ್ಲಿ ಸಿಎಸ್‌ಕೆಯ ಶಿವಂ ದುಬೆ ಲಾಂಗ್-ಆನ್ ಕಡೆಗೆ ಸಿಕ್ಸರ್ ಬಾರಿಸಲು ಯತ್ನಿಸಿದರು. ಆದರೆ, ಅಲ್ಲಿ ಅತ್ಯಂತ ಚಾಣಾಕ್ಷತನದಿಂದ ಓಡಿ ಬಂದು ಗಾಳಿಯಲ್ಲಿ ಜಿಗಿದು ಗಿಲ್ ಹಿಡಿದ ಅದ್ಭುತ ಕ್ಯಾಚ್ ಈಗ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಅವರಿಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
