ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್​​ ಜಾರಕಿಹೊಳಿ – Kannada News | Satish Jarkiholi Seeks Clear Leadership Direction Amid Karnataka Congress Internal Confusion

ದಾವಣಗೆರೆ, ಮಾರ್ಚ್​ 02: ಸದ್ಯದ ಸ್ಥಿತಿಯಲ್ಲಿ ಮುಂದುವರೆದರೆ ಮುಂದೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದು ಕಷ್ಟ ಎಂಬ ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ಸಚಿವ ಸತೀಶ್​​ ಜಾರಕಿಹೊಳಿ ಸಹಮತ ವ್ಯಕ್ತಪಡಿಸಿದ್ದಾರೆ.  ಪಕ್ಷದಲ್ಲಿ ಸ್ಪಷ್ಟತೆಯ ಕೊರತೆಯಿಂದಾಗಿ ಕಾರ್ಯಕರ್ತರು, ಶಾಸಕರು ಮತ್ತು ಅಧಿಕಾರಿಗಳಲ್ಲಿ ಗೊಂದಲ ಉಂಟಾಗಿದೆ. ಈ ಪರಿಸ್ಥಿತಿ ಶೀಘ್ರವಾಗಿ ತಿಳಿಗೊಳ್ಳಬೇಕು. ಪಕ್ಷದ ಭವಿಷ್ಯದ ಬಗ್ಗೆ ಇರುವ ಅನಿಶ್ಚಿತತೆಯನ್ನು ನಿವಾರಿಸಲು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ನಿಂದ ಸ್ಪಷ್ಟ ನಿರ್ದೇಶನ ಬಂದರೆ ಮಾತ್ರ ಈ ಗೊಂದಲ ನಿಲ್ಲುತ್ತದೆ. ಹೈಕಮಾಂಡ್ ಒಂದು ದಿನದಲ್ಲಿಯೇ ಈ ಸಮಸ್ಯೆಯನ್ನು ಬಗೆಹರಿಸುವ ಶಕ್ತಿ ಹೊಂದಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *