ಬೆಂಗಳೂರು, ಆಗಸ್ಟ್ 06: ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆಯ ಕಾರ್ಯಾಚರಣೆ ಎರಡನೇ ದಿನವೂ ಮುಂದುವರಿದಿದೆ. ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ಓಲಾ, ಊಬರ್ ಹಾಗೂ ರಾಪಿಡೋ ಸೇರಿದಂತೆ ಹಲವು ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಪ್ರಮುಖವಾಗಿ, ಕೋರಮಂಗಲ RTO ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ತೀವ್ರಗೊಂಡಿದೆ. ಅಧಿಕಾರಿಗಳು ಈಗಾಗಲೇ 85 ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ. ಅನಧಿಕೃತ ಬೈಕ್ ಟ್ಯಾಕ್ಸಿಗಳ ನಿಯಂತ್ರಣಕ್ಕಾಗಿ ಸಾರಿಗೆ ಇಲಾಖೆಯು ಒಟ್ಟು 11 ತಂಡಗಳನ್ನು ರಚನೆ ಮಾಡಿದೆ. ನಿನ್ನೆ ಒಂದೇ ದಿನ 256 ಬೈಕ್ ಟ್ಯಾಕ್ಸಿಗಳನ್ನು ಅಧಿಕಾರಿಗಳು ಸೀಜ್ ಮಾಡಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.