ಅನುಷ್ಕಾ ಜೊತೆ ಪ್ರಭಾಸ್ ಇನ್ನೂ ಎಷ್ಟು ಒಳ್ಳೆಯ ಗೆಳೆತನ ಇಟ್ಟುಕೊಂಡಿದ್ದಾರೆ ನೋಡಿ

ಅನುಷ್ಕಾ ಜೊತೆ ಪ್ರಭಾಸ್ ಇನ್ನೂ ಎಷ್ಟು ಒಳ್ಳೆಯ ಗೆಳೆತನ ಇಟ್ಟುಕೊಂಡಿದ್ದಾರೆ ನೋಡಿ

ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಪರಸ್ಪರ ಪ್ರೀತಿ ಮಾಡಿದರು ನಂತರ ಬೇರೆ ಆದರು, ಈಗ ಒಬ್ಬರ ಮುಖ ಒಬ್ಬರು ನೋಡಿಕೊಳ್ಳುವುದಿಲ್ಲ, ಅನುಷ್ಕಾ ಮೋಸ ಮಾಡಿದರು.. ಹೀಗೆ ವದಂತಿಗಳ ಪಟ್ಟಿ ದೊಡ್ಡದಾಗುತ್ತಲೇ ಹೋಗುತ್ತದೆ. ಆದರೆ, ಯಾವುದಕ್ಕೂ ಇವರು ಸ್ಪಷ್ಟನೆ ನೀಡಿಲ್ಲ. ಈಗ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಗೆಳೆತನ ಹೇಗಿದೆ ಎಂಬುದರ ಸ್ಪಷ್ಟ ಚಿತ್ರಣ ಸಿಕ್ಕಿದೆ. ಇಬ್ಬರೂ ಒಳ್ಳೆಯ ಬಾಂಧವ್ಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಅನುಷ್ಕಾ ಶೆಟ್ಟಿ ಅವರು ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಬಳಿಕ ಅಪಾರ ಜನಪ್ರಿಯತೆ ಪಡೆದರು. ಅವರಿಗೆ ಸಿಕ್ಕ ಜನಪ್ರಿಯತೆಗೆ ಅವರು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳಬೇಕಿತ್ತು. ಆದರೆ, ಹಾಗೆ ಮಾಡಿಲ್ಲ. ಬದಲಿಗೆ ಅವರು ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆದರು. ಅಲ್ಲೊಂದು, ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸಿದರು. ಈಗ ಅನುಷ್ಕಾ ಶೆಟ್ಟಿ ಅವರ ಹೊಸ ಸಿನಿಮಾ ‘ಕಥನಾರ್’ ರಿಲೀಸ್​​ಗೆ ರೆಡಿ ಇದೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಇದಕ್ಕೆ ಪ್ರಭಾಸ್ ಬೆಂಬಲ ಕೊಟ್ಟಿದ್ದಾರೆ.

ಇದನ್ನೂ ಓದಿ: ಮಲಯಾಳಂಗೆ ಭರ್ಜರಿ ಎಂಟ್ರಿ ಕೊಟ್ಟ ನಟಿ ಅನುಷ್ಕಾ ಶೆಟ್ಟಿ

‘ಕಥನಾರ್’ ಸಿನಿಮಾದ ಟ್ರೇಲರ್ ಅನ್ನು ಪ್ರಭಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಟ್ರೇಲರ್ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಪೋಸ್ಟ್ ಅಲ್ಲಿ ಅವರು ಅನುಷ್ಕಾ ಶೆಟ್ಟಿ ಅವರನ್ನು ಟ್ಯಾಗ್ ಮಾಡಿದ್ದಾರೆ. ಇವರ ಗೆಳೆತನ ನೋಡಿ ಅನೇಕರು ಸಂತಸ ಹೊರಹಾಕಿದ್ದಾರೆ.

ಫ್ಯಾಂಟಸಿ ಶೈಲಿಯಲ್ಲಿ ‘ಕಥನಾರ್’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಜಯಸೂರ್ಯ ನಾಯಕನಾಗಿ ನಟಿಸಿದ್ದಾರೆ. ಅನುಷ್ಕಾ ಶೆಟ್ಟಿ, ನೀಲಿ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಭುದೇವ, ವಿನೀತ್ ಮತ್ತು ಸಂದೀಪ್ ಮಾಸ್ಟರ್ ಸೇರಿದಂತೆ ಇನ್ನೂ ಅನೇಕರು ಸಿನಿಮಾದಲ್ಲಿದ್ದು, ಮೋಹನ್‌ಲಾಲ್ ಅವರು ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ರೋಜನ್ ಥಾಮಸ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *