ಯಾದಗಿರಿ, ಆಗಸ್ಟ್ 06: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಜನಿ ಹಾಗೂ ವೀರ ಜಲಾಶಯಗಳಿಂದ ನೀರು ಬಿಡುಗಡೆ ಮಾಡಲಾಗಿದ್ದು, ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಬಳಿಯ ಭೀಮಾ ನದಿಯು ಮೈದುಂಬಿ ಭೋರ್ಗರೆಯುತ್ತಿದೆ. ಗುರುಸುಣಗಿ ಬ್ಯಾರೇಜ್‌ನ 24 ಕ್ರಸ್ಟ್ ಗೇಟ್‌ಗಳ ಪೈಕಿ 23 ಗೇಟ್‌ಗಳನ್ನು ತೆರೆದು ನದಿಗೆ ಸುಮಾರು 1.20 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದ್ದು, ನದಿ ತೀರದಲ್ಲಿರುವ ಕಂಗಳೇಶ್ವರ ಹಾಗೂ ವೀರಾಂಜನ ದೇವಸ್ಥಾನಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಮುಂಬರುವ ದಿನಗಳಲ್ಲಿ ನದಿಗೆ ನೀರು ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರೈತರ ಜಮೀನುಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದ್ದು, ನದಿ ತೀರಕ್ಕೆ ಸಾರ್ವಜನಿಕರು ಹಾಗೂ ಜಾನುವಾರುಗಳು ತೆರಳದಂತೆ ಮತ್ತು ನೀರೆತ್ತುವ ಪಂಪ್‌ಸೆಟ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
