ಟೆಲ್ ಅವಿವ್, ಫೆಬ್ರವರಿ 25: ಪ್ರಧಾನಿ ಮೋದಿ (PM Modi in Israel) ಇಸ್ರೇಲ್ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4.15ರ ಸುಮಾರಿಗೆ ಇಸ್ರೇಲ್ನ ಟೆಲ್ ಅವಿವ್‌ಗೆ ತಲುಪಿದ್ದಾರೆ. 6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್ಗೆ ತೆರಳಿದ ಮೋದಿಯನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿದರು. ವಿಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅಪ್ಪುಗೆ ಮೂಲಕ ಸ್ವಾಗತಿಸಿದರು. ಈ ವೇಳೆ ನೆತನ್ಯಾಹು ಅವರ ಪತ್ನಿ ಬೆನ್ ಗುರಿಯನ್ ಕೂಡ ಹಾಜರಿದ್ದರು.
ಇಸ್ರೇಲ್ಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರ 2ನೇ ಭೇಟಿ ಇದಾಗಿದೆ. ಈ ಹಿಂದೆ 2017ರಲ್ಲಿ ಮೋದಿ ಇಸ್ರೇಲ್ಗೆ ಭೇಟಿ ನೀಡಿದ್ದರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
