Headlines

ಅಮೆರಿಕ-ಇರಾನ್ ನಡುವೆ ಜಿದ್ದಾಜಿದ್ದಿ: ಮತ್ತೊಮ್ಮೆ ಭೀಕರ ದಾಳಿ ಮಾಡುತ್ತೇವೆ ಎಂದ ಟ್ರಂಪ್‌ಗೆ ಎಚ್ಚರಿಕೆಯಿಂದಿರಿ ಎಂದ ಇರಾನ್ – Kannada News | US Iran Tensions Rise: Trump Threatens Fierce Attack, Iran Vows Retaliation Amidst Peace Talks

ಜ್ಯೂರಿಚ್ , ಜೂನ್ 22: ಒಂದು ಕಡೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವೆ ಯುದ್ಧ ನಿಲ್ಲಿಸುವ ಕುರಿತು ಮಹತ್ವದ ಶಾಂತಿ ಮಾತುಕತೆಗಳು ಆರಂಭವಾಗಿವೆ. ಆದರೆ ಮತ್ತೊಂದೆಡೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಾಯಕರ ನಡುವಿನ ವಾಗ್ದಾಳಿ ಜಗತ್ತಿನಲ್ಲಿ ತೀವ್ರ ಆತಂಕ ಮೂಡಿಸಿದೆ. ಇರಾನ್ ಮೇಲೆ ಮತ್ತೊಮ್ಮೆ ಭೀಕರ ದಾಳಿ ನಡೆಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದರೆ, ನಮ್ಮ ಸಶಸ್ತ್ರ ಪಡೆಗಳು ತಕ್ಕ ಪ್ರತ್ಯುತ್ತರ ನೀಡಲು ಸಿದ್ಧವಾಗಿವೆ ಎಂದು ಇರಾನ್ ತಿರುಗೇಟು ನೀಡಿದೆ.

ಟ್ರಂಪ್ ಹಾಕಿದ ಭೀಕರ ದಾಳಿಯ ಬೆದರಿಕೆ ಏನು?
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರೂತ್ ಸೋಶಿಯಲ್’ನಲ್ಲಿ ಪೋಸ್ಟ್ ಹಾಕಿ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾ ಸೇರಿದಂತೆ ಇರಾನ್ ಬೆಂಬಲಿತ ಸಶಸ್ತ್ರ ಗುಂಪುಗಳು ತೊಂದರೆ ಉಂಟುಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು.

ಒಂದು ವೇಳೆ ಇರಾನ್ ತನ್ನ ಈ ಕೃತ್ಯವನ್ನು ನಿಲ್ಲಿಸದಿದ್ದರೆ, ಕಳೆದ ವಾರ ನಾವು ಇರಾನ್ ಮೇಲೆ ಮಾಡಿದ ದಾಳಿಗಿಂತಲೂ ನೂರು ಪಟ್ಟು ಹೆಚ್ಚು ತೀವ್ರವಾದ ಮತ್ತು ಕಠಿಣವಾದ ಮಿಲಿಟರಿ ದಾಳಿಯನ್ನು ಅಮೆರಿಕ ನಡೆಸಲಿದೆ”ಎಂದು ಟ್ರಂಪ್ ಘರ್ಜಿಸಿದ್ದಾರೆ.

ಮತ್ತಷ್ಟು ಓದಿ: ‘ಇರಾನ್ ಕತೆ ಮುಗಿಯಿತು, ಅವರಿಗೆ ಒಂದು ಪೈಸೆಯೂ ಸಿಗುವುದಿಲ್ಲ’; ಕಿಡಿಕಾರಿದ ಟ್ರಂಪ್

ನಾವು ಮಾತನಾಡುವವರಲ್ಲ, ಮಾಡಿ ತೋರಿಸುವವರು: ಇರಾನ್ ಖಡಕ್ ಉತ್ತರ
ಟ್ರಂಪ್ ಅವರ ಈ ಬೆದರಿಕೆಯನ್ನು ಇರಾನ್‌ನ ಮುಖ್ಯ ಸಮಾಲೋಚಕ ಮೊಹಮ್ಮದ್ ಬಘರ್ ಗಾಲಿಬಾಫ್ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಅಮೆರಿಕದ ಬೆದರಿಕೆಗಳಿಗೆ ನಾವು ಯಾವುದೇ ಬೆಲೆ ಕೊಡುವುದಿಲ್ಲ. ಟ್ರಂಪ್ ತಮ್ಮ ಹೇಳಿಕೆಗಳನ್ನು ನೀಡುವಾಗ ಜಾಗರೂಕರಾಗಿರಬೇಕು. ಅವರ ಬೆದರಿಕೆಗಳು ನಿಜವಾಗಿಯೂ ಕೆಲಸ ಮಾಡುತ್ತಿದ್ದರೆ, ಇಂದು ಅಮೆರಿಕ ಈ ಮಟ್ಟದ ಹತಾಶೆಗೆ ತಲುಪುತ್ತಿರಲಿಲ್ಲ. ಅವರು ಎಷ್ಟು ಬೇಕಾದರೂ ಮಾತನಾಡಿಕೊಳ್ಳಲಿ, ನಮ್ಮ ಸಶಸ್ತ್ರ ಪಡೆಗಳು ವಿಭಿನ್ನವಾಗಿ ಪ್ರತಿಕ್ರಿಯಿಸಲು ಸಜ್ಜಾಗಿವೆ. ನಾವು ಕೇವಲ ಮಾತನಾಡುವವರಲ್ಲ, ಯುದ್ಧಭೂಮಿಯಲ್ಲಿ ಕಾರ್ಯನಿರ್ವಹಿಸುವವರು” ಎಂದು ಗಾಲಿಬಾಫ್ ಸವಾಲು ಹಾಕಿದ್ದಾರೆ.

ಈ ತೀವ್ರ ವಾಗ್ದಾಳಿಗಳ ನಡುವೆಯೂ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಉಭಯ ದೇಶಗಳ ಮುಖಂಡರು ಮಾತುಕತೆ ನಡೆಸುತ್ತಿದ್ದಾರೆ. ಉಪಾಧ್ಯಕ್ಷ ಜೆಡಿ ವ್ಯಾನ್ಸ್, ಟ್ರಂಪ್ ಅವರ ಅಳಿಯ ಜೇರೆಡ್ ಕುಶ್ನರ್ ಮತ್ತು ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಚರ್ಚೆಯಲ್ಲಿದ್ದಾರೆ.

ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮತ್ತು ಮುಖ್ಯ ಸಮಾಲೋಚಕ ಮೊಹಮ್ಮದ್ ಬಘರ್ ಘಾಲಿಬಾಫ್ ಟೆಹ್ರಾನ್ ಪರವಾಗಿ ಭಾಗವಹಿಸಿದ್ದಾರೆ. ಈ ಇಡೀ ಜಾಗತಿಕ ಬಿಕ್ಕಟ್ಟನ್ನು ಬಗೆಹರಿಸಲು ಪಾಕಿಸ್ತಾನ ಮತ್ತು ಕತಾರ್ ದೇಶಗಳು ಮಧ್ಯಸ್ಥಿಕೆ ವಹಿಸಿ ಮಾತುಕತೆಯನ್ನು ಮುನ್ನಡೆಸುತ್ತಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *