ನವದೆಹಲಿ, ಆಗಸ್ಟ್ 12: ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನ ಆರೋಪದ ವಿಚಾರವಾಗಿ ವಿರೋಧ ಪಕ್ಷಗಳ ಸಂಸದರು ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವಾರು ವಿಪಕ್ಷ ಸಂಸದರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯ ಸಂದರ್ಭದಲ್ಲಿ, ಸಂಸದರು ಅಣುಕು ಹುಂಡಿಯನ್ನು ಬಳಸಿ ಅದಕ್ಕೆ ಹಣವನ್ನು ಹಾಕುವ ಮೂಲಕ ಸಾಂಕೇತಿಕವಾಗಿ ತಮ್ಮ ವಿರೋಧ ಪ್ರದರ್ಶಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.