Headlines

ಆಂಧ್ರಪ್ರದೇಶದಲ್ಲೂ ಯಶ್ ಹವಾ; ಸಿನಿಮಾಗೆ ಟಿಕೆಟ್ ದರ ಏರಿಕೆ ಫಿಕ್ಸ್ | Yash Starrer Toxic Planning Ticket Price Hike in Andhra Pradesh Ahead of Grand Release

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಿಗ್ ಬಜೆಟ್ ಸಿನಿಮಾ ‘ಟಾಕ್ಸಿಕ್’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಗ್ಯಾಂಗ್‌ಸ್ಟರ್ ಆಕ್ಷನ್ ಡ್ರಾಮಾ ಚಿತ್ರದ ಮೇಲೆ ದೇಶಾದ್ಯಂತ ಭಾರಿ ನಿರೀಕ್ಷೆ ವ್ಯಕ್ತವಾಗಿದೆ. ಆಗಸ್ಟ್ 26ರಂದು ಈ ಸಿನಿಮಾ ಪ್ರಪಂಚದಾದ್ಯಂತ ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಈ ನಡುವೆ ಆಂಧ್ರಪ್ರದೇಶದಲ್ಲಿ ಚಿತ್ರದ ಟಿಕೆಟ್ ದರವನ್ನು ಹೆಚ್ಚಿಸಲು ಚಿತ್ರತಂಡ ಯೋಜನೆ ರೂಪಿಸಿದೆ. ‘ಕಾಂತಾರ ಚಾಪ್ಟರ್ 1’ ಹಾದಿಯಲ್ಲೇ ಟಾಕ್ಸಿಕ್ ತಂಡ ಕೂಡ ಸರ್ಕಾರದ ಅನುಮತಿಗೆ ಕಾಯುತ್ತಿದೆ. ಬೆಳಗಿನ ಜಾವ 6 ಗಂಟೆಯ ವಿಶೇಷ ಪ್ರದರ್ಶನದ ಟಿಕೆಟ್‌ಗೆ 500 ರೂಪಾಯಿ ನಿಗದಿಪಡಿಸಲು ಚಿಂತಿಸಲಾಗಿದೆ.

ಸಾಮಾನ್ಯ ಪ್ರದರ್ಶನಗಳ ಟಿಕೆಟ್ ದರದಲ್ಲೂ 50 ರಿಂದ 100 ರೂಪಾಯಿಗಳವರೆಗೆ ಹೆಚ್ಚಳವಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಸಾಮಾನ್ಯ ಟಿಕೆಟ್ ದರಗಳಿಂದಾಗಿ ಚಿತ್ರಮಂದಿರಗಳಿಗೆ ಪ್ರೇಕ್ಷಕರ ಹರಿವು ಹೆಚ್ಚಾಗಿತ್ತು. ಹೀಗಾಗಿ ಈ ದರ ಏರಿಕೆಗೆ ತೆಲುಗು ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಒಂದೊಮ್ಮೆ ಇದು ಸಂಭವಿಸಿದರೆ ಸಿನಿಮಾದ ಮೊದಲ ದಿನದ ಗಳಿಕೆ ತೀವ್ರವಾಗಿ ಹೆಚ್ಚವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾ ಅಡ್ವಾನ್ಸ್ ಬುಕಿಂಗ್ ಬಗ್ಗೆ ಸಿಕ್ಕಿತು ದೊಡ್ಡ ಅಪ್​​ಡೇಟ್

ಇತ್ತ ಕರ್ನಾಟಕದಲ್ಲಿ ಯಾವುದೇ ಅಡಚಣೆಗಳಿಲ್ಲ. ಹೀಗಾಗೊ’ಟಾಕ್ಸಿಕ್’ ಸಿನಿಮಾದ ಟಿಕೆಟ್ ದರವನ್ನು ಸುಲಭವಾಗಿ ಮನಸ್ಸಿಗೆ ಬಂದಂತೆ ಏರಿಸಬಹುದು. ಚಿತ್ರದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಅವರಂತಹ ದೊಡ್ಡ ತಾರಾಗಣವಿದೆ. ಯಶ್ ಅವರನ್ನು ಹೊಸ ಅವತಾರದಲ್ಲಿ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಬಿಡುಗಡೆಯ ಮೊದಲ ದಿನವೇ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುವ ಮುನ್ಸೂಚನೆ ಸಿಕ್ಕಿದೆ.

‘ಟಾಕ್ಸಿಕ್’ ಸಿನಿಮಾಗೆ ಗೀತು ಮೋಹನ್​ದಾಸ್ ನಿರ್ದೇಶನ ಮಾಡಿದ್ದಾರೆ. ಯಶ್ ಚಿತ್ರಕ್ಕೆ ಹೀರೋ. ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರದ ಟ್ರೇಲರ್ ಧೂಳೆಬ್ಬಿಸಿದೆ.

ಪ್ರಶ್ನೆ: ಟಾಕ್ಸಿಕ್ ಸಿನಿಮಾದಲ್ಲಿ ಯಶ್ ಅವರ ಪಾತ್ರದ ಹೆಸರೇನು?
ಉತ್ತರ: ರಾಯ ಹಾಗೂ ಟಿಕೆಟ್

ಪ್ರಶ್ನೆ: ಟಾಕ್ಸಿಕ್ ರಿಲೀಸ್ ದಿನಾಂಕ ಏನು?
ಉತ್ತರ: ಆಗಸ್ಟ್ 26

ಪ್ರಶ್ನೆ: ಟಾಕ್ಸಿಕ್ ಚಿತ್ರದ ನಿರ್ದೇಶಕರು ಯಾರು?
ಉತ್ತರ: ಗೀತು ಮೋಹನ್​ ದಾಸ್

Source link

Leave a Reply

Your email address will not be published. Required fields are marked *