
ಪುನೀತ್ ರಾಜ್ಕುಮಾರ್ (Puneeth Rajkumar) ನಟಿಸಿ 2005 ರಲ್ಲಿ ಬಿಡುಗಡೆ ಆಗಿದ್ದ ‘ಆಕಾಶ್’ ಸಿನಿಮಾ ದಶಕಗಳ ಬಳಿಕ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ರಮ್ಯಾ ನಾಯಕಿಯಾಗಿ ನಟಿಸಿದ್ದ ಈ ಸಿನಿಮಾ 2005 ರಲ್ಲಿ ಬಿಡುಗಡೆ ಆಗಿದ್ದಾಗ ಭಾರಿ ದೊಡ್ಡ ಹಿಟ್ ಆಗಿತ್ತು. ಮಹೇಶ್ ಬಾಬು ನಿರ್ದೇಶಿಸಿದ್ದ ಈ ಸಿನಿಮಾಕ್ಕೆ ಪಾರ್ವತಮ್ಮ ರಾಜ್ಕುಮಾರ್ ಬಂಡವಾಳ ಹೂಡಿದ್ದರು. ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾವನ್ನು ಅಪ್ಪು ಅಭಿಮಾನಿಗಳು ಸಂಭ್ರಮದಿಂದ ಸ್ವಾಗತ ಮಾಡಿದ್ದಾರೆ. ನರ್ತಕಿ ಚಿತ್ರಮಂದಿರದಲ್ಲಿಯಂತೂ ಅಪ್ಪು ಅಭಿಮಾನಿಗಳು ಹಬ್ಬವನ್ನೇ ಮಾಡಿದ್ದಾರೆ. ಅಭಿಮಾನಿಗಳ ಸಂಭ್ರಮ ಹೇಗಿತ್ತೆಂಬುದನ್ನು ವಿಡಿಯೋನಲ್ಲಿ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ