ದಾವಣಗೆರೆ, ಜೂನ್ 30: ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ದಾವಣಗೆರೆಯ ಚಿಗಟೇರಿಯಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಸಕಾಲಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದಿದ್ದರಿಂದ ಸಂಭವನೀಯ ದೊಡ್ಡ ದುರಂತವೊಂದು ತಪ್ಪಿದೆ. ಆಸ್ಪತ್ರೆಯ ಗಾಜು ಒಡೆದು ಒಳ ಪ್ರವೇಶಿಸಿದ್ದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆಪರೇಷನ್ ಥಿಯೇಟರ್‌ನಲ್ಲಿ ಇನ್ನಷ್ಟು ಆಕ್ಸಿಜನ್ ಸಿಲಿಂಡರ್‌ಗಳಿದ್ದವು. ಅವು ಕೂಡ ಸ್ಫೋಟಗೊಂಡಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು. ಆದರೆ ಸಕಾಲದಲ್ಲಿ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ತಪ್ಪಿರುವ ಭಾರಿ ಅವಘಡ ತಪ್ಪಿದೆ. ಇನ್ನು ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ಬೆಂಕಿಗಾಹುತಿಯಾಗಿವೆ. ಸಿಲಿಂಡರ್ ಸ್ಫೋಟಗೊಂಡಾಗ ಯಾವುದೇ ರೋಗಿಗಳು ಇರಲಿಲ್ಲ. ಇಂದು ಒಂಬತ್ತು ರೋಗಿಗಳಿಗೆ ಆಪರೇಷನ್ ನಡೆಸಬೇಕಿತ್ತು. ಇದಕ್ಕಾಗಿ ಅರವಳಿಕೆ ತಜ್ಞರು ಸಿದ್ಧತೆ ಮಾಡಿಕೊಂಡಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ 22 ವೈದ್ಯ ಸಿಬ್ಬಂದಿ, ರೋಗಿಗಳು, ಸಂಬಂಧಿಕರು ಸಹ ಆಸ್ಪತ್ರೆಯಿಂದ ಹೊರಬಂದಿದ್ದರು ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
