
ಬೆಂಗಳೂರು, ಮಾರ್ಚ್ 13: ಒಡಿಶಾದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ತಡೆಯುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕೀಯಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಗುರುವಾರ ರಾತ್ರೋರಾತ್ರಿ ಒಡಿಶಾ ಶಾಸಕರು ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೇ ಇದೀಗ ಅಸ್ಸಾಂ ಶಾಸಕರೂ ಬಿಡದಿಯ ವಂಡರ್ ಲಾ ರೆಸಾರ್ಟ್ಗೆ ಬಂದಿಳಿದಿದ್ದಾರೆ. ಕಾಂಗ್ರೆಸ್ ತನ್ನ ಶಾಸಕರನ್ನು ಒಟ್ಟಿಗೆ ಇರಿಸಿ ಪಕ್ಷದ ನಿರ್ಧಾರಕ್ಕೆ ಬದ್ಧರಾಗುವಂತೆ ಮಾಡಲು ಬೆಂಗಳೂರಿಗೆ ಕರೆಸಿಕೊಂಡಿದೆ ಎಂದು ತಿಳಿದುಬಂದಿದೆ. ಇದರಿಂದ ರಾಜ್ಯಸಭಾ ಚುನಾವಣೆಗೆ ಮುನ್ನ ರಾಜಕೀಯ ಚಟುವಟಿಕೆಗಳು ಮತ್ತಷ್ಟು ತೀವ್ರಗೊಂಡಿವೆ.
ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್‌ನಲ್ಲಿ ಅಸ್ಸಾಂನ 10 ಕಾಂಗ್ರೆಸ್ ಶಾಸಕರ ವಾಸ್ತವ್ಯ ಏರ್ಪಡಿಸಲಾಗಿದೆ. ಶಾಸಕರು ರೆಸಾರ್ಟ್‌ಗೆ ಆಗಮಿಸಿದಾಗ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದು, ಅವರ ಭದ್ರತೆಗಾಗಿ ರೆಸಾರ್ಟ್ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಬಿಜೆಪಿಯ ‘ಆಪರೇಷನ್ ಕಮಲ’ ಪ್ರಯತ್ನವನ್ನು ತಡೆಯಲು ಶಾಸಕರನ್ನು ಒಟ್ಟಿಗೆ ಇರಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.