ಬೀದರ್, ಮೇ 08: ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದ ಕಾರ್ಯಕ್ರಮದಲ್ಲಿ ಬಸವಕಲ್ಯಾಣದ ಶಾಸಕ ಶರಣು ಸಲಗರ ತಮ್ಮ ಪತ್ನಿ ಜೊತೆಗೆ ಭರ್ಜರಿ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಬಸವಕಲ್ಯಾಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶರಣು ಸಲಗರ ದಂಪತಿ ಹಿಂದಿ ಹಾಡಿಗೆ ಸಖತ್ ಹೆಜ್ಜೆ ಹಾಕಿದ್ದು ನೆರೆದಿದ್ದವರು ಇವರ ನೃತ್ಯ ಕಂಡು ಫುಲ್ ಖುಷ್ ಆಗಿದ್ದಾರೆ. ಶರಣು ಸಲಗಾರ ಮತ್ತು ಸಾವಿತ್ರಿ ಸಲಗರ ಅವರ ಈ ಡ್ಯಾನ್ಸ್ ಕಂಡು ಅಭಿಮಾನಿಗಳೂ ಸಂತಸಪಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.