ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – Kannada News | RSS Members are Hindutvavadis, Not Hindus: Minister Yathindra Siddaramaiah Backs Priyank Kharge on Registration Row

ಮೈಸೂರು, ಜೂನ್ 16: ಆರ್‌ಎಸ್‌ಎಸ್‌ ಸದಸ್ಯರು ಹಿಂದುಗಳಲ್ಲ, ಬದಲಿಗೆ ಹಿಂದುತ್ವವಾದಿಗಳು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಏನು ಬೇಕಾದರೂ ಮಾಡುವಂತಿಲ್ಲ. ಆರ್‌ಎಸ್‌ಎಸ್‌ ಅನ್ನು ಕೇವಲ ಸಾಂಸ್ಕೃತಿಕ ಸಂಘಟನೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಬದಲಾಗಿ, ಇದು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುವ ರಾಜಕೀಯ ಸಂಸ್ಥೆಯಾಗಿದೆ. ಆರ್‌ಎಸ್‌ಎಸ್‌ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮತ್ತು ಹಣಕಾಸು ವ್ಯವಹಾರಗಳನ್ನು ಹೊಂದಿದೆ. ಈ ಆರ್ಥಿಕ ವ್ಯವಹಾರಗಳಿಗೆ ಲೆಕ್ಕಪತ್ರವನ್ನು ನೀಡಬೇಕು. ಎಲ್ಲರಿಗೂ ಒಂದೇ ಕಾನೂನು ಇರಬೇಕು. ಯಾವುದೇ ಸಂಘಟನೆ ತನ್ನನ್ನು ‘ಹಿಂದೂ ಧರ್ಮ’ದ ನೆರಳಲ್ಲಿ ಬಚ್ಚಿಟ್ಟುಕೊಂಡು, ಕಾನೂನಿನಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಗೃಹ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ನೋಂದಣಿಗೆ ಕೇಳಿರುವುದು ಕಾನೂನು ಪ್ರಕಾರ ಸರಿಯಾಗಿದೆ. ಆರ್‌ಎಸ್‌ಎಸ್‌ ಸಾಂಸ್ಕೃತಿಕ ಸಂಘಟನೆ ಎಂದು ಹೇಳಿಕೊಂಡರೂ, ವಾಸ್ತವದಲ್ಲಿ ಅದೊಂದು ರಾಜಕೀಯ ಸಂಘಟನೆ. ಅದು ಪ್ರತಿಯೊಂದು ಚುನಾವಣೆಯಲ್ಲಿಯೂ ಬಿಜೆಪಿ ಪರವಾಗಿ ಕೆಲಸ ಮಾಡುತ್ತದೆ. ಆದ್ದರಿಂದ, ಆರ್‌ಎಸ್‌ಎಸ್‌ ದೇಶದ ಕಾನೂನುಗಳನ್ನು ಪಾಲಿಸಬೇಕು ಮತ್ತು ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *