ಆರ್. ಮಾಧವನ್ ಹೆಸರಲ್ಲಿ ಮೋಸ: ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ‘ಧುರಂಧರ್’ ನಟ

ಆರ್. ಮಾಧವನ್ ಹೆಸರಲ್ಲಿ ಮೋಸ: ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ‘ಧುರಂಧರ್’ ನಟ

ಬಹುಭಾಷಾ ನಟ ಆರ್. ಮಾಧವನ್ ಅವರ ಹೆಸರಿನಲ್ಲಿ ಕಿಡಿಗೇಡಿಯೊಬ್ಬ ನಕಲಿ ಸೋಶಿಯಲ್ ಮೀಡಿಯಾ (Fake Account) ಖಾತೆಯನ್ನು ತೆರೆದು ಜನರ ದಾರಿ ತಪ್ಪಿಸುತ್ತಿದ್ದಾನೆ. ಈ ವಿಷಯದ ಬಗ್ಗೆ ಸ್ವತಃ ಮಾಧವನ್ ಅವರೇ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ಹೆಸರನ್ನು ಬಳಸಿಕೊಂಡು ಜನರನ್ನು ಸಂಪರ್ಕಿಸುತ್ತಿರುವ ಈ ವ್ಯಕ್ತಿಯೊಂದಿಗೆ ತಮಗಾಗಲಿ ಅಥವಾ ತಮ್ಮ ತಂಡಕ್ಕಾಗಲಿ ಯಾವುದೇ ಸಂಬಂಧವಿಲ್ಲ ಎಂದು ಮಾಧವನ್ (R. Madhavan) ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪೋಸ್ಟ್ ಮಾಡಿರುವ ಮಾಧವನ್ ಅವರು, ‘ಇದು ವಂಚನೆಯ ಖಾತೆ. ಈ ವ್ಯಕ್ತಿ ನನ್ನ ಅಥವಾ ನನ್ನ ತಂಡದ ಪರವಾಗಿ ಮಾತನಾಡುತ್ತಿಲ್ಲ. ಇನ್‌ಸ್ಟಾಗ್ರಾಮ್ ಅಥವಾ ಯಾವುದೇ ಸೋಶಿಯಲ್ ಮೀಡಿಯಾದಲ್ಲಿ ನನ್ನ ಪರವಾಗಿ ಮಾತನಾಡಲು ಬೇರೆ ಯಾವುದೇ ಖಾತೆಗಳಿಲ್ಲ. ದಯವಿಟ್ಟು ಇಂತಹ ಖಾತೆಗಳ ಬಗ್ಗೆ ಜಾಗರೂಕರಾಗಿರಿ” ಎಂದು ಬರೆದುಕೊಂಡಿದ್ದಾರೆ.

 

View this post on Instagram

 

A post shared by R. Madhavan (@actormaddy)

ಅಭಿಮಾನಿಗಳು ಮೋಸ ಹೋಗಬಾರದು ಎಂಬ ಉದ್ದೇಶದಿಂದ ಮಾಧವನ್ ಅವರು ಆ ನಕಲಿ ಖಾತೆಯ ಸ್ಕ್ರೀನ್‌ಶಾಟ್ ಸಹ ಹಂಚಿಕೊಂಡಿದ್ದಾರೆ. ಅಲ್ಲದೆ, ಈ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇಂಥ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಂಬಿ ಜನರು ಮೋಸ ಹೋಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಮಾಧವನ್ ಮೊದಲೇ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಆರ್​. ಮಾಧವನ್​ ಖರೀದಿಸಿದ ಹೊಸ ಬಂಗಲೆ ಬೆಲೆ ಬರೋಬ್ಬರಿ 17.5 ಕೋಟಿ ರೂಪಾಯಿ

ಸಿನಿಮಾ ವಿಚಾರಕ್ಕೆ ಬರುವುದಾದರೆ, ಮಾರ್ಚ್ 19ರಂದು ರಿಲೀಸ್ ಆಗಲಿರುವ ‘ಧುರಂಧರ್ 2’ ಚಿತ್ರದಲ್ಲಿ ಆರ್. ಮಾಧವನ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಇಂಟೆಲಿಜೆನ್ಸ್ ಬ್ಯೂರೋ ಮುಖ್ಯಸ್ಥ ಅಜಯ್ ಸಾನ್ಯಾಲ್ ಎಂಬ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಮೊದಲ ಭಾಗದಲ್ಲಿ ಅವರ ನಟನೆಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು, ಈಗ ಎರಡನೇ ಭಾಗದ ಮೇಲೂ ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *