ಬೆಂಗಳೂರು, ಆಗಸ್ಟ್ 08: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಆಗಸ್ಟ್ 26ರಂದು ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಇಂದು ಬೆಂಗಳೂರಿನ ಎಎಂಬಿ ಮಾಲ್ನಲ್ಲಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ‘ಆಲ್ ದಿ ಬೆಸ್ಟ್ ಯಶ್’ ಹಾಗೂ ‘ಆಲ್ ದಿ ಬೆಸ್ಟ್ ಟಾಕ್ಸಿಕ್’ ಎಂದು ಹೇಳುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿ ಟ್ರೇಲರ್ ಬಿಡುಗಡೆ ಮಾಡಿದರು. ಇನ್ನು ಟ್ರೈಲರ್ ರಿಲೀಸ್ ಇವೆಂಟ್ನಲ್ಲಿ ನಟಿ ರುಕ್ಮಿಣಿ ವಸಂತ್ ಸೇರಿದಂತೆ ಎಲ್ಲಾ ನಟಿಯರು ಹಾಗೂ ಅಕ್ಷಯ್ ಒಬೆರಾಯ್ ಭಾಗಿಯಾಗಿದ್ದಾರೆ.
ಮತ್ತಷ್ಟು ಸಿನಿಮಾ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
