ಆಳಂದದ ದರ್ಗಾದಲ್ಲಿ ಶಿವರಾತ್ರಿ ಪೂಜೆ ನಡೆಸಲು ಸುಪ್ರೀಂ ಗ್ರೀನ್​​ ಸಿಗ್ನಲ್ – Kannada News | Aland Dargah Shivaratri Puja: Supreme Court Dismisses Appeal, Upholds High Court Order

ಕಲಬುರಗಿ, ಫೆ.12: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ (Aland Dargah Shivaratri Puja) ನಡೆಸುವ ವಿಚಾರಕ್ಕೆ ಸಂಬಂಧಿಸಿಂತೆ ಸುಪ್ರೀಂ ಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ. ನೆನ್ನೆ (ಫೆ.11) ಕಲಬುರಗಿ ಹೈಕೋರ್ಟ್‌ ​ ಪೀಠ ಶಿವರಾತ್ರಿ ಪೂಜೆಗೆ ಅನುಮತಿ ನೀಡಿದ ಬೆನ್ನಲ್ಲೇ, ಇದೀಗ ಸುಪ್ರೀಂ ಕೋರ್ಟ್​ ಕೂಡ ಗ್ರೀನ್​​ ಸಿಗ್ನಲ್ ನೀಡಿದೆ. ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಸುಪ್ರೀಂ ಕೋರ್ಟ್ ಸಂಪೂರ್ಣ ಅನುಮತಿ ನೀಡಿದೆ. ದರ್ಗಾ ಆವರಣದಲ್ಲಿ ಪೂಜೆಗೆ ಅವಕಾಶ ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದರ್ಗಾ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಪೂಜೆಗೆ ತಡೆ ನೀಡಲು ನಿರಾಕರಿಸಿದೆ.

ಸಂವಿಧಾನದ 32ನೇ ವಿಧಿ (Article 32) ಇಂತಹ ಉದ್ದೇಶಗಳಿಗಾಗಿ ಅಲ್ಲ ಎಂದು ಸುಪ್ರೀಂ ಕೋರ್ಟ್ ಅರ್ಜಿದಾರರ ವಿರುದ್ಧ ಗರಂ ಆಗಿದೆ. ಕೂಡಲೇ ಅರ್ಜಿಯನ್ನು ಹಿಂಪಡೆಯುವಂತೆ ದರ್ಗಾ ಪರ ಅರ್ಜಿದಾರರಿಗೆ ಸೂಚನೆ ನೀಡಿದೆ. ಕರ್ನಾಟಕ ಹೈಕೋರ್ಟ್ ಕೂಡ ದರ್ಗಾ ಆವರಣದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡಿತ್ತು. ಈಗ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಹೈಕೋರ್ಟಿನ ಆದೇಶವನ್ನು ಎತ್ತಿಹಿಡಿದೆ. ಇದೀಗ ಈ ಆದೇಶದ ಮೂಲಕ ಈ ಬಾರಿಯ ಮಹಾಶಿವರಾತ್ರಿಯಂದು ಪೂಜೆ ನಡೆಸಲು ಇದ್ದ ಕಾನೂನು ಅಡೆತಡೆಗಳು ನಿವಾರಣೆಯಾಗಿವೆ.

ಇದನ್ನೂ ಓದಿ: ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌

ಆಳಂದದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿ ರಾಘವ ಚೈತನ್ಯ ಶಿವಲಿಂಗವಿದೆ. ಇಲ್ಲಿ ಪೂಜೆ ಸಲ್ಲಿಸುವ ವಿಚಾರವಾಗಿ ಕಳೆದ ಕೆಲವು ವರ್ಷಗಳಿಂದ ಎರಡು ಸಮುದಾಯಗಳ ನಡುವೆ ಕಾನೂನು ಹೋರಾಟ ನಡೆಯುತ್ತಿದೆ. ಶಾಂತಿ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತವು ಕೆಲವು ನಿರ್ಬಂಧಗಳನ್ನು ವಿಧಿಸುತ್ತಾ ಬಂದಿತ್ತು. ಸುಪ್ರೀಂ ಕೋರ್ಟ್ ಪೂಜೆಗೆ ಅವಕಾಶ ನೀಡಿರುವುದರಿಂದ, ಮಹಾಶಿವರಾತ್ರಿಯಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಕಲಬುರಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಆಳಂದನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವ ಸಾಧ್ಯತೆ ಇದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *