
‘ಧುರಂಧರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈಗ ಚಿತ್ರದ ಸೀಕ್ವೆಲ್ ‘ಧುರಂಧರ್ 2’ ರಿಲೀಸ್ಗೆ ರೆಡಿ ಆಗುತ್ತಿದೆ. ಮಾರ್ಚ್ 19ರಂದು ಸಿನಿಮಾ ವಿಶ್ವ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ಗಾಗಿ ಫ್ಯಾನ್ಸ್ ಕಾದಿದ್ದರು. ಇಂದು (ಮಾರ್ಚ್ 7) ಬೆಳಿಗ್ಗೆ 11.1ಕ್ಕೆ ಸಿನಿಮಾದ ಟ್ರೇಲರ್ ಬಿಡುಗಡೆ ಕಂಡಿದೆ. ಈ ಟ್ರೇಲರ್ ನೋಡಿದ ಬಳಿಕ ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎಂಬುದರ ಸ್ಪಷ್ಟ ಚಿತ್ರಣ ಸಿಕ್ಕಿದೆ.
‘ಧುರಂಧರ್’ ಚಿತ್ರವನ್ನು ಆದಿತ್ಯ ಧಾರ್ ನಿರ್ದೇಶನ ಮಾಡಿದ್ದಾರೆ. ಮೊದಲ ಚಿತ್ರ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಸಿನಿಮಾ ಸೀಕ್ವೆಲ್ ಮೊದಲ ಭಾಗಕ್ಕಿಂತಲೂ ಹೆಚ್ಚು ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ‘ಧುರಂಧರ್’ ಸಿನಿಮಾ ಕೇಲವ ಹಿಂದಿಯಲ್ಲಿ ಮಾತ್ರ ರಿಲೀಸ್ ಆಗಿತ್ತು. ಈಗ ‘ಧುರಂದರ್ 2’ ಸಿನಿಮಾ ಹಿಂದಿ ಜೊತೆಗೆ ಕನ್ನಡ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಲಿದೆ.
‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಪಾಕಿಸ್ತಾನಕ್ಕೆ ತೆರಳುತ್ತಾರೆ. ಅಲ್ಲಿ ಪಾಕಿಸ್ತಾನದವರಂತೆ ಇದ್ದು, ಸ್ಪೈ ಆಗಿ ಕೆಲಸ ಮಾಡುತ್ತಾರೆ. ಸಿನಿಮಾ ಭರ್ಜರಿ ಆ್ಯಕ್ಷನ್ಗಳನ್ನು ಒಳಗೊಂಡಿತ್ತು. ಕಂದಾಹಾರ್ ಹೈಜ್ಯಾಕ್, ಮುಂಬೈ ದಾಳಿ ಇತ್ಯಾದಿ ವಿಷಯಗಳನ್ನು ಒಳಗೊಂಡಿತ್ತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.