
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ತಮ್ಮ ಸಿನಿಮಾ ಮೂಲಕ ಗಮನ ಸೆಳೆದವರು. ಅವರು ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಅವರು ಬೇರೆಯದೇ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಮುಂಬೈನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಅವರ ಪೋಸ್ಟ್ ಚರ್ಚೆ ಹುಟ್ಟುಹಾಕಿದೆ.
ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಅನೇಕ ಕಡೆಗಳಲ್ಲಿ ವಾಯು ಮಾಲಿನ್ಯ ಗುಣಮಟ್ಟ ಕಳಪೆ ಮಟ್ಟ ತಲುಪಿದೆ. ಮುಂಬೈನ ಕಳಪೆ ವಾಯು ಗುಣಮಟ್ಟದ ಸೂಚ್ಯಂಕದ ಬಗ್ಗೆ ದೀಪಿಕಾ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಕಳವಳ ವ್ಯಕ್ತಪಡಿಸಿ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು ನೇರವಾಗಿ ಬಿಎಂಸಿಗೆ ಟ್ಯಾಗ್ ಮಾಡಿ ಈ ವಿಷಯದ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಗುರುವಾರ, ದೀಪಿಕಾ ಪಡುಕೋಣೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ AQI ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಆ ಸ್ಕ್ರೀನ್‌ಶಾಟ್‌ನಲ್ಲಿ, ಮುಂಬೈನ ಹಲವು ಭಾಗಗಳಲ್ಲಿ ಮಾಲಿನ್ಯದ ಮಟ್ಟ ಹೆಚ್ಚಾಗಿರುವದು ಕಂಡುಬರುತ್ತದೆ. ಈ ಪೋಸ್ಟ್ ಜೊತೆಗೆ, ದೀಪಿಕಾ, ‘ಈ ನಗರ ಮತ್ತು ಇಲ್ಲಿ ವಾಸಿಸುವ ಜನರು ಉಸಿರುಗಟ್ಟಿಸುತ್ತಿದ್ದಾರೆ. ಇದು ಹೇಗೆ ಸರಿಯಾಗಬಹುದು?’ ಎಂದು ಬರೆದಿದ್ದಾರೆ. ಇದರ ಜೊತೆಗೆ, ಅವರು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅನ್ನು ಉಲ್ಲೇಖಿಸಿ, ಈ ಸಮಸ್ಯೆಯ ಬಗ್ಗೆ ಗಮನ ಹರಿಸಬೇಕೆಂದು ಒತ್ತಾಯಿಸಿದರು.
ಮುಂಬೈನಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ವಿಷಯದ ಬಗ್ಗೆ ಕೆಲವು ಕಲಾವಿದರು ಈಗಾಗಲೇ ಧ್ವನಿ ಎತ್ತಿದ್ದಾರೆ. ನಟಿಯರಾದ ಸಯಾಮಿ ಖೇರ್ ಮತ್ತು ರಿಚಾ ಚಡ್ಡಾ ಕೂಡ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದರು.
ದೀಪಿಕಾ ಪಡುಕೋಣೆ ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಅದಕ್ಕಾಗಿಯೇ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಯಾವಾಗಲೂ ಹೆಚ್ಚು ಚರ್ಚೆ ಆಗುತ್ತವೆ. ಈ ಬಾರಿಯೂ ಅವರು ಹಂಚಿಕೊಂಡ ಪೋಸ್ಟ್ ದೊಡ್ಡ ಪ್ರಮಾಣದಲ್ಲಿ ವೈರಲ್ ಆಗಿದ್ದು, ಅನೇಕ ಜನರು ಅವರ ಅಭಿಪ್ರಾಯವನ್ನು ಬೆಂಬಲಿಸಿದ್ದಾರೆ.
ಇದನ್ನೂ ಓದಿ: ಮತ್ತೊಂದು ದೊಡ್ಡ ಅವಕಾಶ ಕಳೆದುಕೊಂಡ ದೀಪಿಕಾ ಪಡುಕೋಣೆ
ದೀಪಿಕಾ ಅವರು ನಿರ್ದೇಶಕ ಅಟ್ಲೀ ಅವರ ಮುಂಬರುವ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಏಪ್ರಿಲ್ 8 ರಂದು ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಚಿತ್ರದ ಶೀರ್ಷಿಕೆಯನ್ನು ಘೋಷಿಸಲಾಗುವುದು ಎಂದು ಹೇಳಲಾಗುತ್ತಿದೆ. ಇದಲ್ಲದೆ, ದೀಪಿಕಾ ಶಾರುಖ್ ಖಾನ್ ಅವರ ‘ಕಿಂಗ್’ ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ಡಿಸೆಂಬರ್ 24 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.