ಬೆಂಗಳೂರು (ಆಗಸ್ಟ್.12): ಕರ್ನಾಟಕದಲ್ಲಿ (Karnataka) ಮತ್ತೆ ಕಾವೇರಿ ನದಿ ನೀರು ವಿವಾದ (Cauvery Water Dispute) ಮುನ್ನೆಲೆಗೆ ಬಂದಿದ್ದು, ಬರದ ಮಧ್ಯೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶ ಹೊರಡಿಸಿರುವುದು ರಾಜ್ಯದ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನಾಳೆ (ಆಗಸ್ಟ್ 13, ಗುರುವಾರ) ‘ಕರ್ನಾಟಕ ಬಂದ್’ (Karnataka Bandh) ಗೆ ಕರೆ ನೀಡಿದ್ದಾರೆ. ಆದರೆ, ಈ ಬಂದ್‌ಗೆ ರೈತ ಸಂಘಟನೆಗಳು ಬಿಟ್ಟರೆ ಬೇರೆ ಯಾವುದೇ ಸಂಘಟನೆಗಳು ಬೆಂಬಲಿಸಿಲ್ಲ. ಆರಂಭದಲ್ಲೇ ಬಂದ್‌ಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದವು. ಆದ್ರೆ, ಇದೇ ಸಮಯಕ್ಕೆ ಸ್ವಲ್ಪ ಮಳೆಯಾಗಿದ್ದರಿಂದ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಇನ್ನು ಸಿಎಂ ಡಿಕೆ ಶಿವಕುಮಾರ್ ಸಹ ರೈತರ ಪರ ನಿರ್ಧಾರ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಕೆಲ ಸಂಘಟನೆಗಳು ಬಂದ್‌ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿವೆ. ಈ ಹಿನ್ನೆಲೆಯಲ್ಲಿ ನಾಳಿನ ಬಂದ್ ಫ್ಲಾಪ್ ಆಗುವ ಸಾಧ್ಯತೆಯಿದ್ದು, ರಾಜ್ಯಾದ್ಯಂತ ಜನಜೀವನ ಎಂದಿನಂತೆ ಯಥಾಸ್ಥಿತಿಯಲ್ಲಿ ಇರಲಿದೆ.
ಖಾಸಗಿ ಶಾಲೆಗಳ ಒಕ್ಕೂಟ, ಖಾಸಗಿ ಬಸ್ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ನೈತಿಕ ಬೆಂಬಲ ಘೋಷಣೆ ಮಾಡಿದ್ದರಿಂದ ಶಾಲಾ-ಕಾಲೇಜುಗಳು, ಸಾರಿಗೆ ಸೇವೆಗಳು ಹಾಗೂ ವಾಣಿಜ್ಯ ಚಟುವಟಿಕೆಗಳು ಯಥಾರೀತಿ ನಡೆಯಲಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ.
ಇದನ್ನೂ ನೋಡಿ: ಕರ್ನಾಟಕ ಬಂದ್‌ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್ ಘೋಷಣೆ
ನಾಳೆ ಬಂದ್ ವೇಳೆ ಏನಿರುತ್ತೆ?
ನಾಳೆ ರಾಜ್ಯದಾದ್ಯಂತ ಬಹುತೇಕ ಎಲ್ಲಾ ಅಗತ್ಯ ಹಾಗೂ ಪ್ರಮುಖ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಸಾರಿಗೆ ಸೇವೆಗಳಾದ KSRTC, BMTC ಬಸ್‌ಗಳು, ನಮ್ಮ ಮೆಟ್ರೋ (Namma Metro), ರೈಲ್ವೆ ಸೇವೆಗಳು, ಆಟೋ ರಿಕ್ಷಾ ಹಾಗೂ ಟ್ಯಾಕ್ಸಿ (Ola/Uber) ಸೇವೆಗಳು ಎಂದಿನಂತೆ ಲಭ್ಯವಿರಲಿವೆ. ಮುಖ್ಯವಾಗಿ ಶಾಲಾ-ಕಾಲೇಜುಗಳು ಎಂದಿನಂತೆ ಓಪನ್ ಇರಲಿವೆ.
ಇನ್ನು ಆರೋಗ್ಯ ಸೇವೆಗಳಾದ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಮೆಡಿಕಲ್ ಶಾಪ್‌ಗಳು ಹಾಗೂ ಆಂಬ್ಯುಲೆನ್ಸ್ ಸೇವೆಗಳು ಯಥಾರೀತಿ ಇರಲಿವೆ.
ಅಗತ್ಯ ಸರಕುಗಳಾದ ದಿನಸಿ ಅಂಗಡಿಗಳು, ಹಾಲು, ತರಕಾರಿ, ಮಾರುಕಟ್ಟೆಗಳು, ಬೇಕರಿ, ಜ್ಯೂಸ್ ಅಂಗಡಿಗಳು ಹಾಗೂ ಬೀದಿ ಬದಿ ವ್ಯಾಪಾರ ವಹಿವಾಟು ನಡೆಯಲಿದೆ.
ವಾಣಿಜ್ಯ ವಲಯಗಳಾದ ಮಾಲ್‌ಗಳು, ಚಿತ್ರಮಂದಿರಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕೈಗಾರಿಕಾ ಕ್ಷೇತ್ರಗಳು ಹಾಗೂ ಸರ್ಕಾರಿ ಆಫೀಸ್‌ಗಳು ಎಂದಿನಂತೆ ಓಪನ್ ಇರಲಿವೆ.
ಬಂದ್‌ಗೆ ಯಾರ ಬೆಂಬಲವಿದೆ?
- ವಾಟಾಳ್ ನಾಗರಾಜ್ ನೇತೃತ್ವದ ‘ಕನ್ನಡ ಸಂಘಟನೆಗಳ ಒಕ್ಕೂಟ’
- ಕನ್ನಡ ಸೇನೆ
- ಕನ್ನಡ ಜಾಗೃತಿ ವೇದಿಕೆ ಹಾಗೂ ಕೆಲವು ಸಣ್ಣಪುಟ್ಟ ಸಂಘಟನೆಗಳು ಮಾತ್ರ ಬಂದ್‌ಗೆ ಬೆಂಬಲ ನೀಡಿವೆ.
ನೈತಿಕ ಬೆಂಬಲ ಘೋಷಿಸಿದ ಹಲವು ಸಂಘಗಳು
- ಕರ್ನಾಟಕದಲ್ಲಿ ಖಾಸಗಿ ಬಸ್ ಒಕ್ಕೂಟಗಳಿಂದ ಬಂದ್‌ಗೆ ನೈತಿಕ ಬೆಂಬಲ
- ಕ್ಯಾಮ್ಸ್ ಹಾಗೂ ರುಪ್ಸಾ ಖಾಸಗಿ ಶಾಲೆಗಳಿಂದ ನೈತಿಕ ಬೆಂಬಲ
- ಹೋಟೆಲ್ ಮಾಲೀಕರ ಸಂಘ
- ಖಾಸಗಿ ಬಸ್ ಒಕ್ಕೂಟ
- ಖಾಸಗಿ ಆಸ್ಪತ್ರೆಗಳು
ಯಾರ ಬೆಂಬಲವಿಲ್ಲ
- ಕರವೇ ಪ್ರವೀಣ್ ಶೆಟ್ಟಿ ಬಣ
- ಶಿವರಾಮೇಗೌಡ ಬಣ
- ನಾರಾಯಣಗೌಡ ಬಣ
- ಬಿಎಂಟಿಸಿ, ಕೆಎಸ್‌ಆರ್‌ಟಿಸಿ
- ಆಟೋ, ಕ್ಯಾಬ್ ಸಂಘಟನೆ
ಒಟ್ಟಿನಲ್ಲಿ ನಾಳಿನ ಕರ್ನಾಟಕ ಬಂದ್‌ಗೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿಲ್ಲ. ಹೀಗಾಗಿ ಎಂದಿನಂತೆ ಜನಜೀವನ, ವ್ಯಾಪಾರ ವಹಿವಾಟುಗಳು ನಡೆಯಲಿವೆ.
