ತುಮಕೂರು, ಮೇ 13: ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ವಯಸ್ಕ ರೈತರೋರ್ವರು ತಮ್ಮ ಸಮಸ್ಯೆಗಳ ಬಗ್ಗೆ ಶಾಸಕರ ಬಳಿ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಅಹವಾಲು ನೀಡಲು ಬಂದ ರೈತ ಬೇರೆ ಬೇರೆ ಭಾಷೆಯಲ್ಲಿ ಮಾತನಾಡುತ್ತಿರುವುದನ್ನು ಕಂಡು ಶಾಸಕ ಸಿ.ಬಿ. ಸುರೇಶ್ ಬಾಬು ಅಚ್ಚರಿಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿ ಎದುರು ಅಚಲವಾಗಿ ನಿಂತಿರುವ ಈ ವಯೋವೃದ್ಧ ರೈತನ ಮನಕಲುಕುವ ಮನವಿಯನ್ನು ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಕೇಳಿ. ಅವರ ಮಾತುಗಳಲ್ಲಿ ನೋವೂ ಇದೆ, ಹೋರಾಟದ ಶಕ್ತಿಯೂ ಇದೆ ಎಂದು ನೆಟ್ಟಿಗರು ಪ್ರಶಂಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
