ಇಂದಿನ ಹವಾಮಾನ: ಕರಾವಳಿಯಲ್ಲಿ ವರುಣನ ಅಬ್ಬರ, ಉತ್ತರ ಒಳನಾಡಲ್ಲಿ ಸುಡು ಬಿಸಿಲು

ಇಂದಿನ ಹವಾಮಾನ: ಕರಾವಳಿಯಲ್ಲಿ ವರುಣನ ಅಬ್ಬರ, ಉತ್ತರ ಒಳನಾಡಲ್ಲಿ ಸುಡು ಬಿಸಿಲು

ಬೆಂಗಳೂರು, ಮಾರ್ಚ್​​ 26: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣ ಕಂಡುಬಂದರೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆ  ಅಂದಾಜಿಸಲಾಗಿದೆ. ಸಾಧಾರಾಣ ಅಥವಾ ಮಧ್ಯಮ ಮಟ್ಟದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಗುಡುಗು-ಮಿಂಚಿನ ಆರ್ಭಟವೂ ಇರಲಿದೆ. ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಮಳೆ?

ಹವಾಮಾನ ಮುನ್ಸೂಚನೆ ಪ್ರಕಾರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ತಾತ್ಕಾಲಿಕವಾಗಿ ಬಿಸಿಲಿನಿಂದ ನಿರಾಳತೆ ಸಿಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಕೂಡ ಗುಡುಗು-ಮಿಂಚಿನೊಂದಿಗೆ ಗಾಳಿ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಕೆಲ ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆಯನ್ನೂ ನೀಡಲಾಗಿದೆ.

ಇದನ್ನೂ ಓದಿ:  ಬೆಳಗಾವಿ, ಹಾವೇರಿಯಲ್ಲಿ ಧಾರಾಕಾರ ಮಳೆ; ನದಿಯಂತಾದ ರಸ್ತೆಗಳು, ಬೈಕ್​ಗಳು ಮುಳುಗಡೆ

ಉತ್ತರ ಮತ್ತು ಒಳನಾಡಲ್ಲಿ ಬಿಸಿಲಿನ ತಾಪ

ಉತ್ತರ ಒಳನಾಡು ಭಾಗದಲ್ಲಿ ಬಿಸಿಲಿನ ತಾಪ ಮುಂದುವರಿಯಲಿದೆ. ದಿನದ ತಾಪಮಾನವು ಸುಮಾರು 32°C ರಿಂದ 36°C ನಡುವೆ ದಾಖಲಾಗಲಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನವು 32–33°C ರವರೆಗೆ ಏರಬಹುದು. ತೇವಾಂಶ ಮಟ್ಟವು ಮಧ್ಯಮ ಮಟ್ಟದಲ್ಲೇ ಇರಲಿದೆ.

ಹವಾಮಾನ ತಜ್ಞರ ಪ್ರಕಾರ, ಸ್ಥಳೀಯ ಹವಾಮಾನ ವ್ಯವಸ್ಥೆಗಳು ಮತ್ತು ಋತು ಬದಲಾವಣೆಯ ಪರಿಣಾಮವಾಗಿ ಈ ರೀತಿಯ ಮಿಶ್ರ ಹವಾಮಾನ ಕಂಡುಬರುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗುತ್ತಿದ್ದರೆ, ಇತರ ಕಡೆಗಳಲ್ಲಿ ಬಿಸಿಲು ತೀವ್ರವಾಗಿದೆ. ದೇಶದ ವಿವಿಧ ಭಾಗಗಳಲ್ಲಿಯೂ ಇದೇ ರೀತಿಯ ಗಾಳಿ-ಮಳೆಯ ಅಸ್ಥಿರತೆ ಕಾಣಿಸಿಕೊಳ್ಳುತ್ತಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *