ಬೆಂಗಳೂರು, ಮೇ 30: ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಿಎಲ್ಪಿ ಸಭೆ ರಾಜಕೀಯ ಬೆಳವಣಿಗೆಗಳ ಮಧ್ಯೆ ಕೆಲ ಅದ್ಭುತ ಕ್ಷಣಗಳಿಗೂ ಸಾಕ್ಷಿಯಾಗಿದೆ. ಈ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭಾವುಕ ಮಾತುಗಳನ್ನಾಡಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಕರ್ನಾಟಕ ರಾಜ್ಯಕ್ಕೆ ಭಾವುಕ ದಿನ. ಸಿದ್ದರಾಮಯ್ಯ ಅವರು ನಮಗೆಲ್ಲರಿಗಾಗಿ ನಿಂತು ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯನವರೇ ನಾವು ನಿಮಗೆ ವಿಶ್ರಾಂತಿ ನೀಡೋದಿಲ್ಲ. ನಿಮ್ಮ ಸೇವೆ ಕರ್ನಾಟಕದ ಜೊತೆ ರಾಷ್ಟ್ರೀಯ ಮಟ್ಟದಲ್ಲೂ ನಿಮ್ಮ ಅಗತ್ಯತೆ ಇದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯನ್ನು ಸಿದ್ದರಾಮಯ್ಯನವರು ದಾರಿ ಸುಗಮಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಿಜೆಪಿಯು ಈ ಪ್ರಕ್ರಿಯೆ ಸುಲಭವಲ್ಲ ಎಂದು ಭಾವಿಸಿತ್ತು. ಆದರೆ ಕಾಂಗ್ರೆಸ್‌ನ ಒಗ್ಗಟ್ಟಿನಿಂದ ಬಿಜೆಪಿಯ ನಿರೀಕ್ಷೆಗೆ ತಣ್ಣೀರು ಎರಚಲಾಯಿತು ಎಂದು ವೇಣುಗೋಪಾಲ್ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
