Headlines

ಇಂದು ಸಂಜೆ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ; ನೇರಪ್ರಸಾರ ವೀಕ್ಷಿಸುವುದು ಹೇಗೆ? – Kannada News | President Droupadi Murmu To Address the Nation today ahead of 80th Independence Day; When And Where To Watch Live?

ನವದೆಹಲಿ, ಆಗಸ್ಟ್ 14: 80ನೇ ಸ್ವಾತಂತ್ರ್ಯ ದಿನಾಚರಣೆಗೂ (Independence Day 2026) ಮುನ್ನ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣವನ್ನು ಆಲ್ ಇಂಡಿಯಾ ರೇಡಿಯೋ ರಾಷ್ಟ್ರೀಯ ಜಾಲ ಮತ್ತು ದೂರದರ್ಶನ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುವುದು. ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೂ ಮುನ್ನ ನಡೆಯುವ ಈ ಭಾಷಣವು ರಾಷ್ಟ್ರದ ಪ್ರಮುಖ ಘಟನೆಯಾಗಿದ್ದು, ರಾಷ್ಟ್ರಪತಿಗಳ ಸಂದೇಶವು ದೇಶದ ಸಾಧನೆಗಳು, ಪ್ರಸ್ತುತ ಸವಾಲುಗಳು ಮತ್ತು ಭವಿಷ್ಯದ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವ ಸಾಧ್ಯತೆಯಿದೆ.

ಅಧಿಕೃತ ಪ್ರಕಟಣೆಯ ಪ್ರಕಾರ, ರಾಷ್ಟ್ರಪತಿಯವರ ಭಾಷಣವು ಮೊದಲು ಹಿಂದಿಯಲ್ಲಿ, ನಂತರ ಇಂಗ್ಲಿಷ್ ಆವೃತ್ತಿಯಲ್ಲಿ ಪ್ರಸಾರವಾಗಲಿದೆ. ಹಿಂದಿ ಮತ್ತು ಇಂಗ್ಲಿಷ್ ಪ್ರಸಾರದ ನಂತರ, ದೂರದರ್ಶನದ ಪ್ರಾದೇಶಿಕ ಚಾನೆಲ್‌ಗಳು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಭಾಷಣವನ್ನು ಪ್ರಸಾರ ಮಾಡಲಿವೆ. ಆಕಾಶವಾಣಿಯು ರಾತ್ರಿ 9.30ಕ್ಕೆ ಆಯಾ ಪ್ರಾದೇಶಿಕ ಜಾಲಗಳಲ್ಲಿ ಪ್ರಾದೇಶಿಕ ಭಾಷಾ ಆವೃತ್ತಿಗಳನ್ನು ಪ್ರಸಾರ ಮಾಡಲಿದೆ.

ಇದನ್ನೂ ಓದಿ: Independence Day 2026: ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣವನ್ನು ದೂರದರ್ಶನ, ಡಿಡಿ ನ್ಯೂಸ್ ಮತ್ತು ಆಲ್ ಇಂಡಿಯಾ ರೇಡಿಯೋದ ಅಧಿಕೃತ ಪ್ರಸಾರ ವೇದಿಕೆಗಳಲ್ಲಿ ವೀಕ್ಷಿಸಬಹುದು. ಪ್ರಸಾರ ಭಾರತಿ ಮತ್ತು ದೂರದರ್ಶನದ ಅಧಿಕೃತ ಡಿಜಿಟಲ್ ವೇದಿಕೆಗಳಲ್ಲಿಯೂ ಪ್ರಸಾರ ಲಭ್ಯವಿರುತ್ತದೆ. ಆಲ್ ಇಂಡಿಯಾ ರೇಡಿಯೋ ರಾಷ್ಟ್ರೀಯ ನೆಟ್‌ವರ್ಕ್ ಮೂಲಕ ರೇಡಿಯೊದಲ್ಲಿ ನೇರ ಪ್ರಸಾರವೂ ಲಭ್ಯವಿರುತ್ತದೆ. ಪ್ರಾದೇಶಿಕ ದೂರದರ್ಶನ ಚಾನೆಲ್‌ಗಳು ಮತ್ತು ಪ್ರಾದೇಶಿಕ ಆಲ್ ಇಂಡಿಯಾ ರೇಡಿಯೋ ನೆಟ್‌ವರ್ಕ್‌ಗಳ ಮೂಲಕ ಪ್ರಾದೇಶಿಕ ಭಾಷೆಗಳಲ್ಲಿ ರಾಷ್ಟ್ರಪತಿಗಳ ಭಾಷಣವನ್ನು ಕೇಳಬಹುದು. ದ್ರೌಪದಿ ಮುರ್ಮು ಅವರ ಭಾಷಣ ಟಿವಿ9 ಕನ್ನಡ ನ್ಯೂಸ್ ಚಾನೆಲ್‌ನಲ್ಲಿಯೂ ಪ್ರಸಾರವಾಗಲಿದೆ.

ಇದನ್ನೂ ಓದಿ: ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿಯ ಹೆಗಲಿಗೊರಗಿ ಕಣ್ಣೀರಿಟ್ಟ ತಾಯಿ; ಮನಕಲಕುವ ವಿಡಿಯೋ ಇಲ್ಲಿದೆ

ಈ ಕೆಳಗಿನ ಲಿಂಕ್ ಕ್ಲಿಕ್ ಮಾಡುವ ಮೂಲಕ ಇಂದು ಸಂಜೆ ಟಿವಿ9 ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣವನ್ನು ನೀವು ವೀಕ್ಷಿಸಬಹುದು.


ನವದೆಹಲಿಯ ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಮಾಡಲಿರುವ ಸ್ವಾತಂತ್ರ್ಯ ದಿನಾಚರಣೆಯ ಭಾಷಣಕ್ಕೂ ಒಂದು ದಿನ ಮುಂಚಿತವಾಗಿ ರಾಷ್ಟ್ರಪತಿಗಳ ಈ ಭಾಷಣ ಪ್ರತಿವರ್ಷ ಪ್ರಸಾರವಾಗುತ್ತದೆ. ಭಾರತವು ಸ್ವಾತಂತ್ರ್ಯದ 80 ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಈ ವರ್ಷದ ಭಾಷಣವು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *