ಇಂಧನ ಪರಿಸ್ಥಿತಿ ಅವಲೋಕಿಸಲು ಉನ್ನತ ಮಟ್ಟದ ಸಭೆ ನಡೆಸಿದ ಪಿಎಂ ಮೋದಿ

ಇಂಧನ ಪರಿಸ್ಥಿತಿ ಅವಲೋಕಿಸಲು ಉನ್ನತ ಮಟ್ಟದ ಸಭೆ ನಡೆಸಿದ ಪಿಎಂ ಮೋದಿ

ನವದೆಹಲಿ, ಮಾರ್ಚ್ 22: ಇರಾನ್ ಯುದ್ಧ ಮುಂದುವರಿಯುತ್ತಲೇ ಇರುವುದರಿಂದ ಜಾಗತಿಕ ತೈಲ ಬಿಕ್ಕಟ್ಟು (Oil crisis) ತೀವ್ರಗೊಳ್ಳುತ್ತಿದೆ. ಭಾರತದಲ್ಲಿ ಸರ್ಕಾರವು ಇಂಧನ ಪೂರೈಕೆಗೆ ಹರಸಾಹಸ ಮಾಡುತ್ತಿದೆ. ಈ ಮುಂದುವರಿದ ಸಂಕಷ್ಟ ಎದುರಿಸಲು ನಡೆದಿರುವ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿಗಳು ಉನ್ನತ ಮಟ್ಟದ ಸಭೆ ನಡೆಸಿದರು. ಪೆಟ್ರೋಲಿಯಂ, ಕಚ್ಚಾ ತೈಲ, ನೈಸರ್ಗಿಕ ಅನಿಲ್, ವಿದ್ಯುತ್, ರಸಗೊಬ್ಬರ ಸೆಕ್ಟರ್​ಗಳಲ್ಲಿ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಈ ಸಭೆ ಮಾಡಿದರು.

ಅತಿರೇಕದ ಸ್ಥಿತಿ ಬಂದರೆ ದೇಶದಲ್ಲಿ ಈ ವಿವಿಧ ಇಂಧನ ಸರಕುಗಳ ದಾಸ್ತಾನು ಎಷ್ಟಿದೆ, ಆಮದು ಎಷ್ಟು ಬೇಕು, ಸಿದ್ಧತೆಯ ಯೋಜನೆಗಳು ಏನೇನು ಎಂಬಿತ್ಯಾದಿ ಮಾಹಿತಿಯನ್ನು ಸರ್ಕಾರದ ಈ ಸಂಬಂಧಿತ ಇಲಾಖೆಗಳ ಉನ್ನತ ಅಧಿಕಾರಿಗಳು ಪ್ರಧಾನಿಗಳಿಗೆ ನಿವೇದಿಸಿದರು. ವಿವಿಧ ಸಚಿವರೂ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಹೋಟೆಲ್, ಮುಂಗಟ್ಟುಗಳಿಗೆ ನಿರಾಳ ಸುದ್ದಿ; ರಾಜ್ಯಗಳಿಗೆ ಕಮರ್ಷಿಯಲ್ ಎಲ್​ಪಿಜಿ ಪೂರೈಕೆ ಶೇ. 50ಕ್ಕೆ ಏರಿಕೆ

ಕಚ್ಚಾ ತೈಲ ಬೆಲೆ ಹೆಚ್ಚಳ ಆಗಿದ್ದರೂ ಭಾರತ ರಷ್ಯಾದಿಂದ ಅದರ ಪೂರೈಕೆ ಪಡೆದಿದೆ. ಭಾರತದಲ್ಲೂ ಪೆಟ್ರೋಲಿಯಂ ದಾಸ್ತಾನು ತಕ್ಕಮಟ್ಟಿಗೆ ಇದೆ. ಹೀಗಾಗಿ, ತೈಲ ಬೆಲೆ ಏರಿಕೆಯ ಶಾಕ್ ಅನ್ನು ಭಾರತ ತಡೆದುಕೊಂಡು, ಸಾಮಾನ್ಯ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆಯಾಗದಂತೆ ನೋಡಿಕೊಂಡಿದೆ. ಪ್ರೀಮಿಯಮ್ ಪೆಟ್ರೋಲ್ ಬೆಲೆ ಮಾತ್ರವೇ ಏರಿಕೆ ಆಗಿರುವುದು.

ಭಾರತಕ್ಕೆ ನೈಸರ್ಗಿಕ ಅನಿಲದ ಅಭಾವವೂ ಹೆಚ್ಚೇನೂ ಕಾಡುತ್ತಿಲ್ಲ. ಪೈಪ್ಡ್ ಗ್ಯಾಸ್ ಪೂರೈಕೆ ನಿರಂತರವಾಗಿದೆ. ಅರ್ಧಕ್ಕಿಂತ ಹೆಚ್ಚಿನ ನೈಸರ್ಗಿಕ ಅನಿಲವು ಭಾರತದಲ್ಲೇ ಸಿದ್ಧವಾಗುತ್ತಿರುವುದರಿಂದ ಅದರ ಪೂರೈಕೆಯಲ್ಲಿ ಅಷ್ಟೇನೂ ವ್ಯತ್ಯಯ ಆಗಿಲ್ಲ. ಆಸ್ಟ್ರೇಲಿಯಾ, ಕೆನಡಾ ಇತ್ಯಾದಿ ಮೂಲಗಳಿಂದ ನ್ಯಾಚುರಲ್ ಗ್ಯಾಸ್ ಪೂರೈಕೆಯನ್ನು ಭಾರತ ಪಡೆಯುತ್ತಿದೆ.

ಆದರೆ, ದೇಶಕ್ಕೆ ಹೆಚ್ಚಿನ ಸಮಸ್ಯೆಯಾಗಿರುವುದು ಎಲ್​ಪಿಜಿಯದ್ದು. ಈ ಪೆಟ್ರೋಲಿಯಂ ಗ್ಯಾಸ್ ಅಭಾವ ಹೆಚ್ಚು ಕಾಡುತ್ತಿದೆ. ಕಮರ್ಷಿಯಲ್ ಗ್ಯಾಸ್ ಬಳಕೆಗೆ ನಿರ್ಬಂಧಗಳನ್ನು ಹಾಕಿದೆ. ಗೃಹಬಳಕೆ ಎಲ್​ಪಿಜಿ ಪೂರೈಕೆಗೆ ಸರ್ಕಾರ ಮೊದಲ ಆದ್ಯತೆ ಕೊಟ್ಟಿದೆ. ಕಮರ್ಷಿಯಲ್ ಗ್ಯಾಸ್ ವಿಚಾರದಲ್ಲಿ ಹೋಟೆಲ್, ರೆಸ್ಟೋರೆಂಟ್ ಇತ್ಯಾದಿ ಸಾಮಾನ್ಯ ಜನರಿಗೆ ಸಂಬಂಧಿಸಿದ ಸೇವೆಗಳಿಗೆ ಆದ್ಯತೆ ಕೊಡಲಾಗುತ್ತಿದೆ.

ಇದನ್ನೂ ಓದಿ: ಟಿಕೆಟ್ ದರ ಮಿತಿ ಕ್ರಮ ಹಿಂತೆಗೆತ, ಜೆಟ್ ಫುಯಲ್ ಬೆಲೆ ಹೆಚ್ಚಳ ಪರಿಣಾಮ ಏ. 1ರಿಂದ ವಿಮಾನ ಟಿಕೆಟ್ ದರ ಏರಿಕೆ?

ವಾಹನಗಳಿಗೆ ಹಾಕಲಾಗುವ ಸಿಎನ್​ಜಿ ಗ್ಯಾಸ್ ಪೂರೈಕೆ ಸಮರ್ಪಕವಾಗಿದೆ ಎಂದು ಸರ್ಕಾರ ಹೇಳಿದರೂ ಹಲವು ನಗರಗಳಲ್ಲಿ ಸಿಎನ್​ಜಿ ಸ್ಟೇಷನ್​ಗಳಲ್ಲಿ ಉದ್ದುದ್ದ ಕ್ಯೂಗಳಿರುವುದನ್ನು ಕಾಣಬಹುದು ಎಂದು ವರದಿಗಳು ಬಂದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *