ಹಾವೇರಿ, ಫೆಬ್ರವರಿ 27: ಜಿಲ್ಲೆಯಿಂದ ಶಿರಸಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟ ಪರಿಣಾಮ ದಕ್ಷಿಣ ಭಾರತದಲ್ಲಿಯೇ ಪ್ರಸಿದ್ಧಿ ಪಡೆದ ಶಿರಸಿಯ ಮಾರಿಕಾಂಬಾ ಜಾತ್ರೆಗೆ ತೆರಳುವ ಭಕ್ತರು ಪ್ರತಿನಿತ್ಯ ಪರದಾಟ ನಡೆಸಬೇಕಾದ ಸ್ಥಿತಿ ಉದ್ಭವವಾಗಿದೆ. ಕಳೆದ ಮೂರು ವರ್ಷಗಳಿಂದ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು, ಹಾವೇರಿ ಜಿಲ್ಲೆಯ ಗಡಿ ದಾಟುತ್ತಿದ್ದಂತೆ 20 ಕಿಲೋ ಮೀಟರ್ ರಸ್ತೆಯಲ್ಲಿ ಜೀವದ ಹಂಗು ತೊರೆದು ವಾಹನ ಸವಾರರು ಸಂಚರಿಸಬೇಕಿದೆ. ಅಕಾಲಿಕವಾಗಿ ಸುರಿದ ಅ್ಪ ಮಳೆಗೇ ರಸ್ತೆ ಕೆಸರು ಗದ್ದೆಯಂತಾಗಿದ್ದು, ಬೈಕ್ ಸವಾರರು ಬಿದ್ದು ಒದ್ದಾಡಿರು ಪ್ರಸಂಗಗಳೂ ನಡೆದಿವೆ. ಈ ರಸ್ತೆಯಲ್ಲಿ ಸುಗಮವಾಗಿ ಸಂಚರಿಸಲು ಸಾಧ್ಯವಾಗದೆ, ಕೆಸರಲ್ಲಿ ಸಿಲುಕಿ ವಾಯನಗಳು ನಿಯಂತ್ರಣ ಕಳೆದುಕೊಂಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲಲ್ಲಿ ವೈರಲ್ ಆಗುತ್ತಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.