ದೇವನಹಳ್ಳಿ, ಮೇ 26: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಟೇಕಾಫ್ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕಾಫ್ಗಾಗಿ ರನ್ವೇಗೆ ಚಲಿಸುತ್ತಿದ್ದ ವೇಳೆ ಇಂಜಿನ್ ಬಳಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನು ರನ್ವೇನಲ್ಲೇ ನಿಲ್ಲಿಸಿದರು. ಸ್ಥಳಕ್ಕೆ ಕೆಐಎಬಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಹಿರಿಯ ತಾಂತ್ರಿಕ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದರು. ಮುಂಜಾಗ್ರತಾ ಕ್ರಮವಾಗಿ ವಿಮಾನದಲ್ಲಿದ್ದ ಪ್ರಯಾಣಿಕರನ್ನು ತುರ್ತು ನಿರ್ಗಮನ ದ್ವಾರದ ಮೂಲಕ ಸುರಕ್ಷಿತವಾಗಿ ಇಳಿಸಿ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
