Headlines

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳ ಜೊತೆ ಲಿವಿನ್ ರಿಲೇಶನ್​ಶಿಪ್; ರೀಲ್ಸ್ ರಾಣಿ ಕಾಟಕ್ಕೆ ಯುವಕ ಬಲಿ? – Kannada News | Bengaluru Live in Relationship Tragedy: Youth Ends Life Over Harassment by woman, Family alleges

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳ ಜೊತೆ ಲಿವಿನ್ ರಿಲೇಶನ್​ಶಿಪ್; ರೀಲ್ಸ್ ರಾಣಿ ಕಾಟಕ್ಕೆ ಯುವಕ ಬಲಿ?

ಬೆಂಗಳೂರು, ಮೇ 09: ನಗರದಲ್ಲಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದವರು (Live-in Relationship) ಸಾವಿಗೆ ಶರಣಾಗುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾದಂತಿದೆ. ಶ್ರೀಗಂಧನಗರದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತನನ್ನು ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಎಂದು ಗುರುತಿಸಲಾಗಿದೆ.

ಮುಖ್ಯಾಂಶಗಳು

  • ರೀಲ್ಸ್ ಮಾಡುವ ಮಹಿಳೆ ಜೊತೆ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಯುವಕ ತಿಪ್ಪೇಸ್ವಾಮಿ ಆತ್ಮಹತ್ಯೆ
  • ಪತಿ-ಮಕ್ಕಳನ್ನು ಬಿಟ್ಟು ಬಂದಿದ್ದ ಮಹಿಳೆಯಿಂದ ಕಿರುಕುಳ ನೀಡುತ್ತಿದ್ದ ಆರೋಪ
  • ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲು

ನಡೆದಿದ್ದೇನು?

ತಿಪ್ಪೇಸ್ವಾಮಿ ಹಾಗೂ ದಾವಣಗೆರೆ ಮೂಲದ ಮಹಿಳೆಯೊಬ್ಬರಿಗೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಈಕೆ ರೀಲ್ಸ್ ಮಾಡುವುದರಲ್ಲಿ ಸಕ್ರಿಯಳಾಗಿದ್ದು, ಇಬ್ಬರೂ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಬಂದಿದ್ದ ಈಕೆ, ಕಳೆದ ಎರಡು ತಿಂಗಳಿನಿಂದ ತಿಪ್ಪೇಸ್ವಾಮಿ ಜೊತೆ ಶ್ರೀಗಂಧನಗರದ ಬಾಡಿಗೆ ಮನೆಯಲ್ಲಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದಳು. ಮನೆ ಮಾಲೀಕರಿಗೆ ತಾವು ದಂಪತಿಗಳೆಂದು ಸುಳ್ಳು ಹೇಳಿ ವಾಸವಿದ್ದರು ಎನ್ನಲಾಗಿದೆ.

ಇದನ್ನೂ ಓದಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಯುವತಿ ನೇಣಿಗೆ ಶರಣು! ಪ್ರಿಯಕರನ ಮೇಲಿನ ಅನುಮಾನವೇ ಮುಳುವಾಯ್ತಾ?

ಕಿರುಕುಳದ ಆರೋಪ

ನನ್ನನ್ನು ಮೇಂಟೇನ್ ಮಾಡಲು ನಿನ್ನಿಂದ ಸಾಧ್ಯವಿಲ್ಲ, ನನ್ನನ್ನು ಬಿಟ್ಟು ಹೋಗು ಎಂದು ಮಹಿಳೆ ತಿಪ್ಪೇಸ್ವಾಮಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಮನನೊಂದ ತಿಪ್ಪೇಸ್ವಾಮಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಕುಟುಂಬಸ್ಥರು ಮಹಿಳೆಯ ಕಿರುಕುಳವೇ ಸಾವಿಗೆ ನೇರ ಕಾರಣ ಎಂದು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಘಟನೆ ನಡೆದ ಬಳಿಕ ಮಹಿಳೆ ನಾಪತ್ತೆಯಾಗಿದ್ದು, ಪೊಲೀಸರು ಆಕೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *