ನ್ಯೂಯಾರ್ಕ್, ಆಗಸ್ಟ್ 18: ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗದ ಆಯಕಟ್ಟಿನ ಜಾಗದಲ್ಲಿರುವ ಹಾರ್ಮುಜ್ ಜಲಸಂಧಿಯನ್ನು (Strait of Hormuz) “ಅಮೆರಿಕದ ಭೂಭಾಗ” (US Territory) ಎಂದು ಡೊನಾಲ್ಡ್ ಟ್ರಂಪ್ ಶೀಘ್ರದಲ್ಲೇ ಘೋಷಿಸಲಿದ್ದಾರಂತೆ. ತಮ್ಮ ಟ್ರೂತ್ ಸೋಷಿಯಲ್ ಖಾತೆಯಲ್ಲಿ ಅವರು ಹಾರ್ಮುಜ್ ಜಲಸಂಧಿಯನ್ನು ಅಮೆರಿಕದ ಹೊಸ ಭೂಭಾಗ ಎಂದು ಬಿಂಬಿಸುವ ಒಂದು ಫೋಟೋವನ್ನು ಹಂಚಿಕೊಂಡಿದ್ದಾರೆ. ಟ್ರಂಪ್ ಅವರ ಈ ವರ್ತನೆ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ನ್ಯೂಯಾರ್ಕ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಇರಾನ್ ವಿರುದ್ಧದ ಸಂಘರ್ಷ ಮುಗಿದ ನಂತರ ಹಾರ್ಮುಜ್ ಜಲಸಂಧಿಯನ್ನು ಯುಎಸ್ ಟೆರಿಟರಿ ಎಂದು ಅಧಿಕೃತವಾಗಿ ಘೋಷಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಹೊಂದಿದ್ದು, ಅದನ್ನು “ಉಕ್ಕಿನ ಗೋಡೆ”ಯಂತೆ (Wall of Steel) ನಂತೆ ನಿರ್ಬಂಧಿಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಇದನ್ನೂ ಓದಿ: ಭಾರತದ ಮತದಾರರ ಗುರುತಿನ ಚೀಟಿ ವ್ಯವಸ್ಥೆಗೆ ಟ್ರಂಪ್ ಫಿದಾ! ಇಂಡಿಯನ್ ಮಾಡೆಲ್ ಉಲ್ಲೇಖಿಸಿ ‘ಸೇವ್ ಅಮೆರಿಕಾ ಆ್ಯಕ್ಟ್’ಗೆ ಒತ್ತಾಯ
ಇರಾನ್ ಅನ್ನು ಸಂಪೂರ್ಣವಾಗಿ ಸೋಲಿಸಿ, ಹಾರ್ಮುಜ್ ಜಲಸಂಧಿಯನ್ನು ಅಮೆರಿಕದ ಭೂಭಾಗ ಎಂದು ಘೋಷಿಸುವ ಕಾಲ ಸನ್ನಿಹಿತವಾಗಿದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.
ಇರಾನ್ ತಿರುಗೇಟು: ಟ್ರಂಪ್ ಹೇಳಿಕೆಯನ್ನು ಇರಾನ್ನ ಉಪ ವಿದೇಶಾಂಗ ಸಚಿವ ಕಾಜೆಮ್ ಗರಿಬಾಬಾದಿ ತೀವ್ರವಾಗಿ ಖಂಡಿಸಿದ್ದಾರೆ. “ಹಾರ್ಮುಜ್ ಜಲಸಂಧಿಯನ್ನು ಟ್ವೀಟ್ ಮಾಡುವ ಮೂಲಕ ಅಥವಾ ಭಾಷಣಗಳ ಮೂಲಕ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಅದು ಹಿಂದೆಂದೂ ಇರಾನ್ಗೆ ಸೇರಿತ್ತು, ಈಗಲೂ ಇರಾನ್ಗೆ ಸೇರಿದೆ ಮತ್ತು ಎಂದಿಗೂ ಇರಾನ್ಗೇ ಸೇರಿರುತ್ತದೆ. ಜಲಸಂಧಿಯನ್ನು ತೆರೆಯುವುದು ಅಥವಾ ಮುಚ್ಚುವುದು ಇರಾನ್ನ ನಿರ್ಧಾರವಾಗಿರುತ್ತದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಇಮ್ರಾನ್ ಖಾನ್ಗೆ ಕೋರ್ಟ್ನಿಂದ ಬಿಗ್ ರಿಲೀಫ್: 48 ಗಂಟೆಗಳಲ್ಲಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಕ್ಕೆ ಆದೇಶ
ಜಾಗತಿಕ ತೈಲ ಬಿಕ್ಕಟ್ಟು: ಜಗತ್ತಿನ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯ ಶೇ. 20 ರಷ್ಟು ಭಾಗವು ಈ ಹಾರ್ಮುಜ್ ಜಲಸಂಧಿಯ ಮೂಲಕವೇ ಸಾಗಣೆಯಾಗುತ್ತದೆ. ಈ ಜಲಸಂಧಿಯಲ್ಲಿ ನೌಕಾಯಾನ ಸಂಚಾರ ಸ್ಥಗಿತಗೊಂಡಿರುವುದರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತು ಇಂಧನ ಬೆಲೆಗಳು ಏರಿಕೆಯಾಗುತ್ತಿದ್ದು, ಜಾಗತಿಕ ಆತಂಕ ಹೆಚ್ಚಾಗಿದೆ.
ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ