
ಬೆಂಗಳೂರು, ಫೆಬ್ರವರಿ 28: ಇಸ್ರೇಲ್ ಮತ್ತು ಇರಾನ್ ನಡುವೆ ಪ್ರಾದೇಶಿಕ ಉದ್ವಿಗ್ನತೆ ಉಲ್ಬಣಗೊಂಡಿದ್ದು, ಇರಾನ್ ಇಸ್ರೇಲ್ ವಿರುದ್ಧ ನಿರೀಕ್ಷಿತವಲ್ಲದ ಪ್ರತಿದಾಳಿ ನಡೆಸಿದೆ. ಟೆಲ್ ಅವಿವ್ ಸೇರಿದಂತೆ ಇಸ್ರೇಲ್‌ನ ಪ್ರಮುಖ ನಗರಗಳ ಮೇಲೆ ಸುಮಾರು 400 ಕ್ಷಿಪಣಿಗಳನ್ನು ಹಾರಿಸಲಾಗಿದೆ. ಇಸ್ರೇಲ್‌ನ ಹೋಲೋನ್‌ನಲ್ಲಿ ಕ್ಷಿಪಣಿಗಳು ಅಪ್ಪಳಿಸಿದ್ದು, ದಟ್ಟ ಹೊಗೆ ಆವರಿಸಿದೆ. ಇನ್ನು ಈ ಸಂಘರ್ಷ ಇಸ್ರೇಲ್‌ಗೆ ಮಾತ್ರ ಸೀಮಿತವಾಗಿಲ್ಲ. ಇರಾನ್ ಅರಬ್ ರಾಷ್ಟ್ರಗಳಾದ ಬಹರೈನ್, ಕತಾರ್, ಕುವೈತ್, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್ ಮೇಲೂ ದಾಳಿ ನಡೆಸಿದೆ. ಬಹರೈನ್ ಮತ್ತು ಕತಾರ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳು ಸಹ ಇರಾನ್‌ನ ಗುರಿಯಾಗಿವೆ. ಕತಾರ್ ರಾಜಧಾನಿ ದೋಹಾದಲ್ಲಿ ಸ್ಪೋಟದ ಸದ್ದು ಕೇಳಿಬಂದಿದೆ. ಇದರ ಪರಿಣಾಮವಾಗಿ ಭಾರತಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನಗಳು ರದ್ದುಗೊಂಡಿದ್ದು, ಭಾರತಕ್ಕೆ ವಾಪಸಾಗಿವೆ. ಇಸ್ರೇಲ್‌ನಲ್ಲಿ ವಾಸಿಸುತ್ತಿರುವ ಕನ್ನಡಿಗರು ಸುರಕ್ಷಿತ ಸ್ಥಳಗಳಾದ ಬಂಕರ್‌ಗಳಿಗೆ ತೆರಳಿ ಆಶ್ರಯ ಪಡೆಯುತ್ತಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಕನ್ನಡಿಗರೊಬ್ಬರು ಮಾತನಾಡಿದ್ದು ಹೀಗೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.