
ರಿಯಾದ್, ಮಾರ್ಚ್ 20: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಉಲ್ಬಣಗೊಳ್ಳುತ್ತಲೇ ಇದೆ. ಇಸ್ರೇಲ್-ಇರಾನ್ (Israel- Iran War) ನಡುವಿನ ಯುದ್ಧದಲ್ಲಿ ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿ (Riyadh Attack) ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಶುಕ್ರವಾರ ದೃಢಪಡಿಸಿದೆ. ಅವರ ಮೃತದೇಹವನ್ನು ಭಾರತಕ್ಕೆ ಶೀಘ್ರವಾಗಿ ಹಿಂದಿರುಗಿಸಲಾಗುವುದು ಎಂದು ಅಲ್ಲಿನ ಸರ್ಕಾರ ಹೇಳಿದೆ. “ಮಾರ್ಚ್ 18ರಂದು ರಿಯಾದ್ನಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಭಾರತೀಯ ಪ್ರಜೆಯೊಬ್ಬರು ದುರಂತವಾಗಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತು” ಎಂದು ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ (ಗಲ್ಫ್) ಅಸೀಮ್ ಮಹಾಜನ್ ಪತ್ರಿಕಾಗೋಷ್ಠಿಯಲ್ಲಿ ಖಚಿತಪಡಿಸಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ