
ನವದೆಹಲಿ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದ್ದಾರೆ. ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಪ್ರಾದೇಶಿಕ ಸ್ಥಿರತೆ ಮತ್ತು ಕಡಲ ಭದ್ರತೆಗೆ ಆ ಯುದ್ಧದ ಪರಿಣಾಮಗಳ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಮುಖ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ.
“ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಎಚ್ಆರ್ಎಚ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಚರ್ಚಿಸಿದ್ದೇನೆ. ಪ್ರಾದೇಶಿಕ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಭಾರತ ಖಂಡಿಸುತ್ತದೆ ಎಂದು ನಾನು ಪುನರುಚ್ಚರಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಕೆಲಸ ಮಾಡಿ ಮುಗಿಸುವ ಇಬ್ಬರು ವ್ಯಕ್ತಿಗಳೆಂದರೆ ನಾನು ಮತ್ತು ಮೋದಿ; ಟ್ರಂಪ್ ಅಚ್ಚರಿಯ ಮೆಚ್ಚುಗೆ
“ಹಡಗು ಮಾರ್ಗಗಳು ಮತ್ತು ವ್ಯಾಪಾರ ಮಾರ್ಗಗಳ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ನಡುವೆ ಈ ಪ್ರದೇಶದಲ್ಲಿ ನಿರಂತರ ಸಮುದ್ರ ಸಂಚಾರದ ಅವಕಾಶದ ಮಹತ್ವವನ್ನು ಎರಡೂ ಕಡೆಯವರು ಒಪ್ಪಿಕೊಂಡಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Spoke with Crown Prince and PM of Saudi Arabia, HRH Prince Mohammed bin Salman and discussed the ongoing conflict in West Asia.
I reiterated India’s condemnation of attacks on regional energy infrastructure.
We agreed on the need to ensure freedom of navigation and keeping…
— Narendra Modi (@narendramodi) March 28, 2026
ಇದೇ ವೇಳೆ, ಸೌದಿ ಅರೇಬಿಯಾದಲ್ಲಿ ವಾಸಿಸುವ ಭಾರತೀಯ ಸಮುದಾಯಕ್ಕೆ ನೀಡಿದ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಸೌದಿ ಕ್ರೌನ್ ಪ್ರಿನ್ಸ್ಗೆ ಧನ್ಯವಾದ ಅರ್ಪಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ