ಇರಾನ್ ಸಂಘರ್ಷ ತೀವ್ರ ಕಳವಳಕಾರಿ; ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಪ್ರಧಾನಿ ಮೋದಿ ಮನವಿ – Kannada News | Middle East situation matter of concern PM Modi calls for diplomacy to resolve conflict

ನವದೆಹಲಿ: ಇಸ್ರೇಲ್-ಇರಾನ್ ಯುದ್ಧದ ಉಲ್ಬಣಗೊಳ್ಳುತ್ತಿರುವ ನಡುವೆ, ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿ ತೀವ್ರ ಕಳವಳಕಾರಿ ವಿಷಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದು, ಭಾರತ ಶಾಂತಿ ಮತ್ತು ಸ್ಥಿರತೆಗಾಗಿ ವಿನಂತಿಸುತ್ತಲೇ ಇದೆ ಎಂದು ಅವರು ಹೇಳಿದ್ದಾರೆ. ಇಂದು ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದಲ್ಲಿ ಒಮನ್​ನಲ್ಲಿ ಓರ್ವ ಭಾರತೀಯ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.

ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳಿಗೆ ಪರಿಹಾರವನ್ನು ಕಂಡುಕೊಳ್ಳುವುದರ ಪರವಾಗಿ ಭಾರತ ಯಾವಾಗಲೂ ನಿಲುವು ತಳೆದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ವಿಶ್ವಾದ್ಯಂತ ನಡೆಯುತ್ತಿರುವ ಅನೇಕ ಉದ್ವಿಗ್ನತೆಗಳ ಬಗ್ಗೆ ಭಾರತದ ನಿಲುವು ಸ್ಪಷ್ಟವಾಗಿದೆ. ನಾವು ಯಾವಾಗಲೂ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಕರೆ ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರಜೆಗಳ ರಕ್ಷಣೆಗಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ; ಇರಾನ್‌ ವಿರುದ್ಧ ಅಮೆರಿಕ ಮುಂತಾದ 7 ದೇಶಗಳ ಜಂಟಿ ಹೇಳಿಕೆ

ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿಯಿಂದ ತೊಂದರೆಗೊಳಗಾದ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಹಲವಾರು ದೇಶಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಮೋದಿ ಹೇಳಿದ್ದಾರೆ.

ಇದಕ್ಕೂ ಮೊದಲು, ಪ್ರಧಾನಿ ಮೋದಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಮಯದಲ್ಲಿ, ಪ್ರಧಾನಿ ಮೋದಿ ಯುದ್ಧವನ್ನು ಬೇಗನೆ ಕೊನೆಗೊಳಿಸುವಂತೆ ಕರೆ ನೀಡಿದರು ಮತ್ತು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಕಳವಳಗಳನ್ನು ತಿಳಿಸಿದರು. ನಾಗರಿಕರ ಸುರಕ್ಷತೆಯು ಮೊದಲ ಆದ್ಯತೆಯಾಗಿರಬೇಕು ಎಂದು ಅವರು ಒತ್ತಿ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *