ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ: ಶ್ರೀಮಂತರಿಗೂ ಫ್ರೀ ಕೊಡೋದು ಕಷ್ಟ ಎಂದ ಬಾಲಕೃಷ್ಣ – Kannada News | Congress MLA HC Balakrishna Questions Free Guarantee Schemes, Says Benefits to Rich Are a Burden on Government

ಬೆಂಗಳೂರು, ಮಾರ್ಚ್ 2: ಮಾಗಡಿ ಶಾಸಕ ಹೆಚ್​ಸಿ ಬಾಲಕೃಷ್ಣ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಆಗ್ರಹಿಸಿದ್ದಾರೆ. ಈ ಯೋಜನೆಗಳು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿವೆ ಎಂದು ಅವರು ಹೇಳಿದ್ದಾರೆ. ಉಳ್ಳವರಿಗೂ ಮತ್ತು ಆರ್ಥಿಕವಾಗಿ ಸದೃಢರಿಗೂ ಗ್ಯಾರಂಟಿ ಸೌಲಭ್ಯಗಳು ಲಭಿಸುತ್ತಿವೆ. ಇದರಿಂದ ಯೋಜನೆಗಳ ನಿಜವಾದ ಉದ್ದೇಶ ಈಡೇರುತ್ತಿಲ್ಲ ಮತ್ತು ಸರ್ಕಾರಕ್ಕೆ ಅನಗತ್ಯ ಹೊರೆ ಹೆಚ್ಚುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಬಡವರು ಮತ್ತು ಬಿಪಿಎಲ್ ಕಾರ್ಡುದಾರರಿಗೆ ಮಾತ್ರ ಗ್ಯಾರಂಟಿ ಯೋಜನೆಗಳ ಪ್ರಯೋಜನ ದೊರೆಯಬೇಕು. ಇದಕ್ಕಾಗಿ ಸರ್ಕಾರ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಿ, ಅರ್ಹರನ್ನು ಮಾತ್ರ ಗುರುತಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಉದಾಹರಣೆಗೆ, ಬಸ್ಸಿನಲ್ಲಿ ಶ್ರೀಮಂತರು ಉಚಿತವಾಗಿ ಪ್ರಯಾಣಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ, ಯೋಜನೆಗಳನ್ನು ಸೂಕ್ತ ಮಾನದಂಡಗಳೊಂದಿಗೆ ಪರಿಷ್ಕರಿಸಿದರೆ, ಉಳಿತಾಯವಾಗುವ ಹಣವನ್ನು ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದು ಎಂದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಬಾಲಕೃಷ್ಣ ಮನವಿ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಈ ಬಗ್ಗೆ ಪರಿಷ್ಕರಣೆ ನಡೆಸದ ಸರ್ಕಾರದ ನಿಲುವಿನ ಬಗ್ಗೆಯೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *