ಉಡುಪಿಯ ಹೆಜಮಾಡಿ ಟೋಲ್ ಬಳಿ ಮದ್ಯದ ನಶೆಯಲ್ಲಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ: ವಿಡಿಯೋ ವೈರಲ್​ – Kannada News | Kerala Students Udupi Trip Turns Chaotic with Hejamadi Toll Disturbance

ಉಡುಪಿ, ಫೆಬ್ರವರಿ 04: ಕೇರಳದಿಂದ ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಗುಂಪೊಂದು ಹೆಜಮಾಡಿ ಟೋಲ್ ಬಳಿ ಪುಂಡಾಟ ನಡೆಸಿರುವ ಘಟನೆ ನಡೆದಿದೆ. ಎರಡು ಬಸ್ಸುಗಳಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಟೋಲ್ ಗೇಟ್ ಬಳಿ ಬಸ್ ನಿಲ್ಲಿಸಿ ಮದ್ಯಸೇವಿಸಿ, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ. ಇವರ ಈ ಕಿರಿಕ್ ಮತ್ತು ಪುಂಡಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಇಂತಹ ಅನಗತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಇತರ ಪ್ರಯಾಣಿಕರಿಗೆ ತೊಂದರೆ ಉಂಟುಮಾಡುವುದಲ್ಲದೆ, ಸ್ಥಳೀಯ ಕಾನೂನು ಸುವ್ಯವಸ್ಥೆಗೂ ಭಂಗ ತರುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *