ಕಾರವಾರ, ಜುಲೈ 17: ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುತ್ತಿದ್ದು, ಅಂಕೋಲಾ ತಾಲೂಕಿನಲ್ಲಿ ವರ್ಷಧಾರೆ ಸುರಿಯುತ್ತಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಕೋಲಾ ತಹಶೀಲ್ದಾರ್ ಅವರು ಹೊರಡಿಸಿರುವ ಆದೇಶದ ಪ್ರಕಾರ, ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಮತ್ತೊಂದೆಡೆ, ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ-ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿ ಸಂಚಾರಕ್ಕೆ ಅಡ್ಡಿಯಾಗಿದೆ. ಸದ್ಯ ರಸ್ತೆಯಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
