ಬೆಂಗಳೂರು, ಏಪ್ರಿಲ್ 16: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಗೊಂದಲದ ನಡುವೆ ದಾವಣಗೆರೆ ಉಪ ಚುನಾವಣೆಗೆ ಸಂಬಂಧ ರಾಜ್ಯ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಜಮೀರ್ ಕೂಡ ಪ್ರಚಾರದಲ್ಲಿ ಭಾಗಿಯಾಗದ ಕಾರಣ ಮುಂದಿನ ಟಾರ್ಗೆಟ್ ಜಮೀರ್ ಎನ್ನಲಾಗ್ತಿದೆ. ಸಚಿವ ಸಂಪುಟ ಪುನಾರಚನೆಯಾದ್ರೆ ಜಮೀರ್ ಕೈ ಬಿಡ್ತಾರೆಂಬ ಚರ್ಚೆ ಕಾಂಗ್ರೆಸ್ ಮನೆಯಲ್ಲಿ ಸದ್ದು ಮಾಡುತ್ತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ಜಮೀರ್ ಅಹ್ಮದ್ಗೆ ಸಲಹೆ ನೀಡಿದ್ದಾರೆ. ಬಳಿಕ ವಿಧಾನಸೌಧದ ಕೆಂಗಲ್ ಗೇಟ್‌ನಲ್ಲಿ ಸಚಿವ ಜಮೀರ್ ನಿಲ್ಲಿಸಿಕೊಂಡ ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಗೆಲುವಿನ ಭವಿಷ್ಯ ನುಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.