ಉಪಚುನಾವಣೆ ಪ್ರಚಾರಕ್ಕೆ ಉಚ್ಛಾಟಿತ ಶಾಸಕ? ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯ ಸ್ಫೋಟಕ ಹೇಳಿಕೆ

ಉಪಚುನಾವಣೆ ಪ್ರಚಾರಕ್ಕೆ ಉಚ್ಛಾಟಿತ ಶಾಸಕ? ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯ ಸ್ಫೋಟಕ ಹೇಳಿಕೆ

ಬಾಗಲಕೋಟೆ, ಮಾರ್ಚ್​​ 19: ಉಪ ಚುನಾವಣೆಯ ಬಾಗಲಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಮಾರ್ಚ್ 23ರ ಸೋಮವಾರದಂದು ತಮ್ಮ ನಾಮಪತ್ರವನ್ನು ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ, ಯಡಿಯೂರಪ್ಪ ಸೇರಿ ರಾಜ್ಯಾದ್ಯ ಪ್ರಮುಖ ನಾಯಕರು ಮತ್ತು ಮಾಜಿ ಮಂತ್ರಿಗಳು ಭಾಗವಹಿಸಲಿದ್ದಾರೆ.  ಪ್ರಧಾನಮಂತ್ರಿಗಳ ಸೂಚನೆಯಂತೆ ಚುನಾವಣೆಯನ್ನು ಹಬ್ಬದಂತೆ ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಬರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ವಿಜಯಪುರ ಶಾಸಕ ಯತ್ನಾಳ್​​ ಕೂಡ ವೈಯಕ್ತಿಕ ಸಂಬಂಧಗಳ ಆಧಾರದ ಮೇಲೆ ಪ್ರಚಾರದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿರೋದು ಅಚ್ಚರಿ ಮೂಡಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *