
ಕೊಡಗು, ಏಪ್ರಿಲ್ 04: ಪ್ರವಾಸಿಗರ ಬಸ್ವೊಂದು ಕಾರಿನ ಮೇಲೆ ಉರುಳಿ ಬಿದ್ದಿರುವಂತಹ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ಸುದೀಪ್ ಅತಿ ವೇಗವಾಗಿ ಬಸ್ ಚಲಾಯಿಸಿದ್ದಾರೆ. ಈ ವೇಳೆ ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಬಸ್ ಉರುಳಿ ಬಿದ್ದಿದೆ. ಸದ್ಯ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.