ಕಾಂಗ್ರೆಸಿಗರ ಜಂಟಿ ಸುದ್ದಿಗೋಷ್ಠಿImage Credit source: Tv9 Kannada
ನವದೆಹಲಿ, ಮೇ 26: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜೊತೆಗಿನ ಸುದೀರ್ಘ ಸಭೆ ಬಳಿಕ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಸುದೀರ್ಘ ಸಭೆ ಹಿಂದಿನ ಕಾರಣವನ್ನು ರಿವೀಲ್ ಮಾಡಿದ್ದಾರೆ. ರಾಜ್ಯ ನಾಯಕರಿಗೆ ಹೈಕಮಾಂಡ್ನಿಂದ ದಿಢೀರ್ ಬುಲಾವ್ ಬಂದಿದ್ದ ಹಿನ್ನೆಲೆ ನಾಯಕತ್ವ ಬದಲಾವಣೆ ಸೇರಿ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ನಾಯಕರು ಈ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.
ಸಭೆಯಲ್ಲೆ ಚರ್ಚೆಯಾಗಿದ್ದೇನು?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಮ್ಮುಖದಲ್ಲಿ ಇವತ್ತು ದೆಹಲಿಯಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆದಿತ್ತು. ಹೀಗಾಗಿ ವರಿಷ್ಠರು ಸದ್ಯ ಪಕ್ಷದಲ್ಲಿರುವ ಎಲ್ಲ ಗೊಂದಲಗಳಿಗೂ ತೆರೆ ಎಳೆಯಬಹುದೆಂಬ ನಿರೀಕ್ಷೆ ಇತ್ತು. ಆದರೆ ಸಭೆ ಬಗ್ಗೆ ಮಾಹಿತಿ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ನಲ್ಲಿ ಯಾವುದೇ ಗೊಂದಲ ಇಲ್ಲ. ಚುನಾವಣೆ ಸಂಬಂಧ ಮಾತ್ರ ಸಿಎಂ, ಡಿಸಿಎಂ ಜತೆ ಮಾತುಕತೆ ನಡೆಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)