ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ (AI Impact Summit) ಸಭಾಂಗಣದೊಳಗೆ ಶರ್ಟ್ ಬಿಚ್ಚಿ, ಮೋದಿ-ಟ್ರಂಪ್ ಫೋಟೋ ಇದ್ದ ಟಿ-ಶರ್ಟ್ ಹಿಡಿದುಕೊಂಡು, ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯರ್ತರನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ ನಾಲ್ವರನ್ನು ಇಂದು ಪಟಿಯಾಲ ಹೌಸ್ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು. ಆ ನಾಲ್ವರನ್ನೂ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ನೇಪಾಳದ ಜೆನ್‌ಝಡ್ ಪ್ರತಿಭಟನೆಯಿಂದ ಪ್ರೇರಿತರಾದ ಕಾಂಗ್ರೆಸ್ ಕಾರ್ಯಕರ್ತರು ಎಐ ಶೃಂಗಸಭೆಯಲ್ಲಿ ಗಲಭೆ ಸೃಷ್ಟಿಸಲು ಪಿತೂರಿ ನಡೆಸಿದ್ದರು ಎಂದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ. “ಪ್ರಧಾನಿ ಮೋದಿ ರಾಜಿ ಮಾಡಿಕೊಂಡಿದ್ದಾರೆ” ಎಂಬ ಸ್ಲೋಗನ್ ಹೊಂದಿರುವ ಟಿ-ಶರ್ಟ್‌ಗಳನ್ನು ಹೈಯಲ್ಲಿ ಹಿಡಿದು ಬೀಸುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿ, ಅಲ್ಲಿ ಸೇರಿದ್ದ ಸಾವಿರಾರು ಜನರ ಗಮನ ಸೆಳೆದಿದ್ದರು. ಜಾಗತಿಕ ನಾಯಕರು ಭಾಗವಹಿಸಿದ್ದ ಈ ಶೃಂಗಸಭೆಯಲ್ಲಿ ಈ ರೀತಿಯ ಅಸಭ್ಯ ವರ್ತನೆ ತೋರಿದ್ದರಿಂದ ಕೇಂದ್ರ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿತ್ತು.
Indian Youth Congress AI Summit Protest Case: Patiala House Court sends all four arrested accused to police custody for five days.
Bail applications of all four accused have been rejected. https://t.co/1DXzWBPMyt pic.twitter.com/W187chx7oU
— ANI (@ANI) February 21, 2026
ಇದನ್ನೂ ಓದಿ: ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ
ಈ ಕಾಂಗ್ರೆಸ್ ಪ್ರತಿಭಟನಾಕಾರರು ನೇಪಾಳದ ಜೆನ್‌ಝಡ್ ಪ್ರತಿಭಟನೆಯಿಂದ ಪ್ರೇರಿತರಾಗಿದ್ದಾರೆ. ಶೃಂಗಸಭೆಯಲ್ಲಿ ಅದೇ ರೀತಿಯ ಚಳವಳಿಯನ್ನು ನಡೆಸಲು ಬಯಸಿದ್ದರು. ಹೀಗಾಗಿ, ಬಂಧಿತ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು 5 ದಿನಗಳ ಕಸ್ಟಡಿಗೆ ನೀಡುವಂತೆ ದೆಹಲಿ ಪೊಲೀಸರು ನ್ಯಾಯಾಲಯದ ಮುಂದೆ ಕೋರಿದ್ದರು. ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವಂತೆ ಮಾಡಲು ಸಂಚು ರೂಪಿಸಲಾಗುತ್ತಿದೆ ಎಂದು ಪೊಲೀಸರು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ತಿಳಿಸಿದ್ದರು. ಇದಾದ ಬಳಿಕ ನ್ಯಾಯಾಲಯವು ಆರೋಪಿಗಳನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.
#WATCH | Delhi | Four arrested Youth Congress leaders brought out of the Patiala House Court
One of the arrested accused says, “Hardeep Singh Puri must go.” https://t.co/1DXzWBPMyt pic.twitter.com/DTRfsf1QBc
— ANI (@ANI) February 21, 2026
“ಪ್ರತಿಭಟನೆ ಶಾಂತಿಯುತವಾಗಿತ್ತು. ಯಾವುದೇ ವೀಡಿಯೊಗಳಲ್ಲಿ ಹಿಂಸಾಚಾರ ಕಂಡುಬಂದಿಲ್ಲ. ಅವರೆಲ್ಲರೂ ಪದವೀಧರರು, ಸುಶಿಕ್ಷಿತರು. ರಾಜಕೀಯ ಪ್ರೇರಣೆಯಿಂದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆರೋಪಿಯ ಪರ ವಕೀಲರು ವಾದ ಮಂಡಿಸಿದ್ದರು.
ಇದನ್ನೂ ಓದಿ: ದೆಹಲಿಯ ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
“ಆರೋಪಿಗಳು ರಾಷ್ಟ್ರವಿರೋಧಿ ಘೋಷಣೆಗಳನ್ನು ಕೂಗಿದರು. ಪ್ರಧಾನಿ ವಿರುದ್ಧ ಸಂದೇಶಗಳನ್ನು ಹೊಂದಿರುವ ಟಿ- ಶರ್ಟ್‌ಗಳನ್ನು ಧರಿಸಿದ್ದರು” ಎಂದು ಸರ್ಕಾರಿ ವಕೀಲರು ವಾದಿಸಿದರು.
ಭಾರತ್ ಮಂಟಪದಲ್ಲಿ ನಡೆದ AI ಶೃಂಗಸಭೆಯ ಸಂದರ್ಭದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧಿಸಲಾದ ನಾಲ್ವರು ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಇಂದು ಬೆಳಿಗ್ಗೆ ಪಟಿಯಾಲ ಹೌಸ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಬಂಧಿತ ವ್ಯಕ್ತಿಗಳನ್ನು ಕೃಷ್ಣ ಹರಿ, ಕುಂದನ್ ಯಾದವ್, ಅಜಯ್ ಕುಮಾರ್ ಮತ್ತು ನರಸಿಂಹ ಯಾದವ್ ಎಂದು ಗುರುತಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 3:22 pm, Sat, 21 February 26
